ADVERTISEMENT

ತುಮಕೂರು: ಮೈಸೂರು ಸ್ಯಾಂಡಲ್ ಸಾಬೂನು ಮೇಳ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 5:33 IST
Last Updated 22 ಅಕ್ಟೋಬರ್ 2024, 5:33 IST
ಕೆ.ಎಸ್.ಗಂಗಪ್ಪ
ಕೆ.ಎಸ್.ಗಂಗಪ್ಪ   

ತುಮಕೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಯಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ನಗರದ ಚಿಲುಮೆ ಸಮುದಾಯ ಭವನದಲ್ಲಿ ಅ. 22ರಿಂದ 31ರವರೆಗೆ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ 10 ದಿನ ಸಾಬೂನು ಮೇಳ ನಡೆಯಲಿದ್ದು, ಸಂಸ್ಥೆಯಲ್ಲಿ ಉತ್ಪಾದಿಸುವ ಎಲ್ಲಾ ಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳ ಇರುತ್ತದೆ ಎಂದು ಸಂಸ್ಥೆ ಮಾರುಕಟ್ಟೆ ವಿಭಾಗದ ಪ್ರಧಾನ ವ್ಯವಸ್ಥಾಪಕ ಕೆ.ಎಸ್.ಗಂಗಪ್ಪ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ಬಹುರಾಷ್ಟ್ರೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ಸಂಸ್ಥೆ ಉತ್ತಮ ವಹಿವಾಟು ಹೊಂದಿದ್ದು, 2023-24ನೇ ಸಾಲಿನಲ್ಲಿ ₹1,570 ಕೋಟಿ ವಹಿವಾಟು ನಡೆಸಿ ₹362 ಕೋಟಿ ನಿವ್ವಳ ಲಾಭ ಗಳಿಸಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಈವರೆಗೆ ₹901.39 ಕೋಟಿ ವಹಿವಾಟು ನಡೆಸಿದೆ. ಅಲ್ಲದೆ ನಮ್ಮ ಉತ್ಪನ್ನಗಳು 20 ರಾಷ್ಟ್ರಗಳಿಗೆ ರಫ್ತಾಗುತ್ತಿದೆ. ದೇಶದ 6 ಕಡೆಗಳಲ್ಲಿ ಶಾಖಾ ಕಚೇರಿ ಹೊಂದಿದೆ ಎಂದು ಮಾಹಿತಿ ನೀಡಿದರು.

ADVERTISEMENT

ರಾಜ್ಯದ 900 ರೈತರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, 3,308 ಹೆಕ್ಟೇರ್ ಪ್ರದೇಶದಲ್ಲಿ ಶ್ರೀಗಂಧದ ಮರ ಬೆಳೆಸಲು ಪ್ರೋತ್ಸಾಹ ನೀಡಲಾಗಿದೆ. ಸಂಸ್ಥೆ ವತಿಯಿಂದ ಸಸಿಗಳನ್ನು ವಿತರಿಸಿ ಅವುಗಳನ್ನು ಬೆಳೆಸಲು ಮಾರ್ಗದರ್ಶನ, ದರ ನಿಗದಿ ಇತ್ಯಾದಿ ಸೇವೆ ಒದಗಿಸಲಾಗುತ್ತಿದೆ. ಶ್ರೀಗಂಧದ ಸಸಿಗಳನ್ನು 10ರಿಂದ 15 ವರ್ಷ ಬೆಳೆಸಿದ ನಂತರ ಕಟಾವಿಗೆ ಬರುತ್ತವೆ. ಅರಣ್ಯ ಇಲಾಖೆ ನಿರ್ದೇಶನದಂತೆ ಮರದ ಕಾಂಡ, ರೆಂಬೆ, ಬೇರುಗಳು ಸೇರಿದಂತೆ ವಿವಿಧ ಭಾಗಕ್ಕೆ ಪ್ರತ್ಯೇಕವಾಗಿ ಬೆಲೆ ನಿಗದಿಮಾಡಿ ಖರೀದಿಸಲಾಗುತ್ತದೆ ಎಂದು ಹೇಳಿದರು.

ಸಹಾಯಕ ಪ್ರಧಾನ ವ್ಯವಸ್ಥಾಪಕ ಗುರುಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.