ತುರುವೇಕೆರೆ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷರಾಗಿ ಗುಡ್ಡೇನಹಳ್ಳಿ ಪ್ರಸನ್ನಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡ, ಮಧ್ಯಮ ವರ್ಗದ ಜನರ ಜೀವನ ಮಟ್ಟ ಸುಧಾರಿಸುತ್ತಿದೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ವಿದ್ಯಾನಿಧಿ, ಶಕ್ತಿಯೋಜನೆ ಮಹಿಳೆಯರ ಉಚಿತ ಪ್ರಯಾಣ ಸೇರಿದಂತೆ ಐದು ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಕೌಶಲ್ಯಾಭಿವೃದ್ಧಿ ಮಾಜಿ ಅಧ್ಯಕ್ಷ ಮುರುಳಿಧರ ಹಾಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಳಾಲನಾಗರಾಜು, ದೇವರಾಜು, ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ್ ಮಹೇಶ್, ನಾಮಿನಿ ಸದಸ್ಯ ರುದ್ದೇಶ್, ಮಾಜಿ ಸದಸ್ಯರಾದ ಶಶಿಶೇಖರ್, ಶ್ರೀನಿವಾಸ್ ಮುಖಂಡರಾದ ನಂಜುಂಡಪ್ಪ, ಗವಿರಂಗಪ್ಪ, ಪ್ರಕಾಶ್, ಮಹೇಂದ್ರ, ಸಂದೀಪ್ ಗ್ರಾರಂಟಿ ಸಮಿತಿ ಸದಸ್ಯರಾದ ಮುನಿಯೂರು ಗಿರೀಶ್, ಸುಜಿತ್ ಕುಮಾರ್, ಜವರೇಗೌಡ, ಶಿವರಾಜು, ಶತ್ರುಘ್ನೇಗೌಡ, ಗಂಗಾಧರಯ್ಯ, ಲಕ್ಷ್ಮಿದೇವಮ್ಮ, ಹರ್ಷಿತ, ಪ್ರಮೋದ್ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.