ADVERTISEMENT

ಸಮಸ್ಯೆಯ ಮೂಲ ‘ದುರಾಸೆ’: ಸಂತೋಷ್‌ ಹೆಗ್ಡೆ

ಮಕ್ಕಳು, ವಿದ್ಯಾರ್ಥಿಗಳಿಗೆ ನೂತನ ಆರೋಗ್ಯ ಯೋಜನೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 3:11 IST
Last Updated 13 ಜೂನ್ 2024, 3:11 IST
<div class="paragraphs"><p>ತುಮಕೂರಿನ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ&nbsp;ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ನೂತನ ಆರೋಗ್ಯ ಯೋಜನೆ ಕಾರ್ಯಕ್ರಮದಲ್ಲಿ&nbsp;ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. </p></div>

ತುಮಕೂರಿನ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ನೂತನ ಆರೋಗ್ಯ ಯೋಜನೆ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

   

ತುಮಕೂರು: ಪ್ರಸ್ತುತ ಸಮಾಜ ಕೆಟ್ಟು ಹೋಗಿದೆ. ಜೈಲಿಗೆ ಹೋಗಿ ಬಂದವರನ್ನು ಹೂವಿನ ಹಾರ ಹಾಕಿ ಸನ್ಮಾನಿಸುವ ಸ್ಥಿತಿಯಲ್ಲಿ ನಾವಿದ್ದೇವೆ. ಇದು ಶೋಚನೀಯ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಕಳವಳ ವ್ಯಕ್ತಪಡಿಸಿದರು.

ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ಬುಧವಾರ ಪಾವಗಡ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಬೆಂಗಳೂರಿನ ನಯೋನಿಕ್ ಐಕೇರ್‌ ಟ್ರಸ್ಟ್, ಡಾ.ಚಂದ್ರಶೇಖರ್‌ ಸ್ಪೀಚ್‌ ಅಂಡ್ ಹಿಯರಿಂಗ್ ಇನ್‌ಸ್ಟಿಟ್ಯೂಟ್, ಜಿಲ್ಲಾ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ನೂತನ ಆರೋಗ್ಯ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಮನುಷ್ಯ ದುರಾಸೆಗೆ ಬಿದ್ದು ಶ್ರೀಮಂತನಾಗಲು ಹವಣಿಸುತ್ತಿದ್ದಾನೆ. ಸಮಾಜದ ಎಲ್ಲ ಸಮಸ್ಯೆಗಳಿಗೆ ಇದೇ ಮೂಲ. ಇದು ಅವನ ತಪ್ಪಲ್ಲ, ಸಮಾಜದ ತಪ್ಪು. ಜೀವನದ ಅಗತ್ಯ ಪೂರೈಸಲು ಹಣ ಬೇಕು. ಹಾಗಂತ ಬೇರೆಯವರ ಜೇಬಿನಿಂದ ದುಡ್ಡು ಕದಿಯಬಾರದು, ರಾಜ ಮಾರ್ಗದಲ್ಲಿ ಸಂಪಾದಿಸಬೇಕು. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಯುವಕ-ಯುವತಿಯರು ಸಂಕಲ್ಪ ತೊಟ್ಟರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದರು.

ಪಾವಗಡ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದ, ‘ವೈದ್ಯರೇ ದೇಶದ ಆಸ್ತಿ, ಭವಿಷ್ಯ. ನುರಿತ ವೈದ್ಯರ ಸಹಾಯದಿಂದ ಪಾವಗಡದ 800 ಮಕ್ಕಳಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಹಳ್ಳಿಯ ಜೀವನ ಕಷ್ಟಕರವಾಗಿದ್ದು, ವೈದ್ಯರು ಕನಿಷ್ಠ ಎರಡು ವರ್ಷವಾದರೂ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕು’ ಎಂದು ಮನವಿ ಮಾಡಿದರು.

ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್‌, ‘ಬೇರೆಯವರ ನೋವು-ಸಂಕಷ್ಟ ಅರ್ಥ ಮಾಡಿಕೊಂಡರೆ ಮಾನವೀಯ ಗುಣ ತಾನಾಗಿಯೇ ಮೂಡುತ್ತದೆ’ ಎಂದು ಅಭಿಪ್ರಾಯಪಟ್ಟರು.

ಡಾ.ಎಸ್.ಆರ್.ಚಂದ್ರಶೇಖರ್‌ ಇನ್‌ಸ್ಟಿಟ್ಯೂಟ್‍ನ ಸಿ.ಎ.ಸುರೇಶ್ ಬಾಬು, ವಿ.ಎಸ್.ಶಾಂತವದನ, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ಎಂ.ರಮಣ್‌, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಡಾ.ಲಾವಣ್ಯ, ಪತ್ರಕರ್ತ ಎಸ್.ನಾಗಣ್ಣ, ನಯೋನಿಕ್‌ ಐಕೇರ್‌ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಡಾ.ಪ್ರಶಾಂತ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.