ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿ, ಬಂಧನಕ್ಕೆ ಒಳಗಾಗಿದ್ದ ಎನ್‍ಎಸ್‍ಯುಐ 24 ಕಾರ್ಯಕರ್ತರಿಗೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜೂನ್ 1ರಂದು ಸಚಿವರ ಮನೆ ಎದುರು ಪ್ರತಿಭಟನೆ ನಡೆದಿದ್ದು, ನಂತರ 24 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ತಿಪಟೂರಿನ ಹಿರಿಯ ಶ್ರೇಣಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಕಳೆದ ಕೆಲವು ದಿನಗಳಿಂದ ಜಾಮೀನಿಗಾಗಿ ಬಂಧಿತರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಶನಿವಾರ ಜಾಮೀನು ತಿರಸ್ಕೃತಗೊಂಡಿದ್ದು, ಸೋಮವಾರ ಮತ್ತೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಜಾಮೀನು ಮಂಜೂರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.