ಕುಣಿಗಲ್: ರಾಮನವಮಿ ಪಾನಕ ಸೇವಿಸಿದ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು. ಸಂಜೆಯಾಗುತ್ತಿದ್ದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಲ್ಲೂಕು ಆರೋಗ್ಯ ಅಧಿಕಾರಿ ಮರಿಯಪ್ಪ, ಆಡಳಿತಾಧಿಕಾರಿ ಗಣೇಶಬಾಬು ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ದೋಷ ಪೂರಿತ ಪಾನಕ ಸೇವನೆಯೇ ಘಟನೆಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಾಸಕ ಡಾ.ರಂಗನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.