ತುಮಕೂರು: ‘ಈಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಗಣತಂತ್ರ ವ್ಯವಸ್ಥೆಗೆ ಮತ್ತಷ್ಟು ಅಪಾಯ ಕಾದಿದೆ’ ಎಂದು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.
ನಗರದಲ್ಲಿ ಜನಾಂದೋಲನಗಳ ಮಹಾಮೈತ್ರಿ ಸಂಯುಕ್ತ ಹೋರಾಟ–ಕರ್ನಾಟಕ ಹಾಗೂ ಇತರೆ ಸ್ಥಳೀಯ ಜನಪರ ಸಂಘಟನೆಗಳ ಸಹಕಾರದೊಂದಿಗೆ ಭಾನುವಾರ ಹಮ್ಮಿಕೊಂಡಿದ್ದ ‘ಪ್ರಜಾತಂತ್ರ ವ್ಯವಸ್ಥೆಯ ಸವಾಲುಗಳು ಮತ್ತು ಪರಿಹಾರೋಪಾಯಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತುಸಾರ್ವಜನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರಹಾಳು ಮಾಡುತ್ತಿದೆ. ಶಿಕ್ಷಣ, ಸಾರ್ವಜನಿಕ ಸಂಸ್ಥೆಗಳು ಹಾಗೂ ಸಾಮಾಜಿಕ ಮೌಲ್ಯಗಳನ್ನು ವಿನಾಶಗೊಳಿಸುವ ಹುನ್ನಾರ ನಡೆಯುತ್ತಿದೆ. ಪ್ರಜ್ಞಾವಂತರ ತಂಡ ಕಟ್ಟುವ ಮೂಲಕ ಪರ್ಯಾಯ ವ್ಯವಸ್ಥೆ ಹುಟ್ಟು ಹಾಕುವ ಕೆಲಸ ಮಾಡಬೇಕು. ವ್ಯಾಪಕವಾದ ಭ್ರಷ್ಟಾಚಾರ, ನಿರುದ್ಯೋಗದ ವಿರುದ್ಧ ಧ್ವನಿ ಗೂಡಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.