ಪಾವಗಡ: ಈ ಭಾಗದ ರೈತರಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನಿಡಲಾಗುವುದು ಎಂದು ಲೋಕಸಭೆ ಸದಸ್ಯ ಗೋವಿಂದ ಎಂ.ಕಾರಜೋಳ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಜೆಡಿಎಸ್ ಮತ್ತು ಬಿಜೆಪಿ ತಾಲ್ಲೂಕು ಘಟಕ ಆಯೋಜಿಸಿದ್ದ ಅಭಿನಂದನೆ, ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದರು.
ರೈತರಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಹದಾಯಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆಗಳ ಸಮಗ್ರ ವರದಿ ನೀಡಲಾಗಿದೆ. ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು. ತಿಂಗಳಿಗೊಮ್ಮೆ ತಾಲ್ಲೂಕಿಗೆ ಆಗಮಿಸಿ ಒಂದು ದಿನ ಪೂರ್ತಿ ಜನರಿಂದ ಅಹವಾಲು ಸ್ವೀಕರಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ಎಂ ತಿಮ್ಮರಾಯಪ್ಪ, ಎಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು, ಈ ಭಾಗದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಅನುಕೂಲವಾಗಲಿದೆ ಎಂದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಗಣನೀಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನಿಡಿಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಸರ್ಕಾರ ಅಭಿವೃದ್ಧಿ ಕೆಲಸ ಮಾಡದೆ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ ಅಂಜಿನಪ್ಪ, ಸ್ಥಳೀಯ ಶಾಸಕರು ಕ್ಷೇತ್ರದ ಅಭಿವೃದ್ಧಿ ಮರೆತಂತಿದೆ. ಕೇಂದ್ರ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಕೆಲಸವಾಗಬೇಕಿದೆ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಏನ್.ಎ ಈರಣ್ಣ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಂಗಣ್ಣ, ಡಾ.ಜಿ.ವೆಂಕಟರಾಮಯ್ಯ, ಎನ್.ತಿಮ್ಮರೆಡ್ಡಿ, ಬಲರಾಮರೆಡ್ಡಿ, ಅಕ್ಕಲಪ್ಪನಾಯ್ಡು, ಮನು ಮಹೇಶ್, ಬ್ಯಾಡನೂರು ಶಿವು, ಅಂಬಿಕಾ ರಮೇಶ್, ಗಂಗಾಧರ್ ನಾಯ್ಡು, ಆಂಜನೇಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.