ತುಮಕೂರು: ನಿಷೇಧಿತ ಮಾವೋವಾದಿ ನಕ್ಸಲರ ಜೊತೆ ಗಿರೀಶ್ ಕಾರ್ನಾಡ್ ನಂಟು ಹೊಂದಿದ್ದು, ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಕೂಡಲೇ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಗುರುವಾರ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಸೆ.5ರಂದು ಬೆಂಗಳೂರಿನಲ್ಲಿ ಗೌರಿಲಂಕೇಶ್ ಬಳಗದಿಂದ ಆಯೋಜಿಸಿದ್ಧ ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ಯೆ ಸಪ್ತಾಹದಡಿ ನಡೆದ ವಿಚಾರಗೋಷ್ಠಿಯಲ್ಲಿ ಅರ್ಬನ್ ನಕ್ಸಲ್ ಎಂಬ ಫಲಕ ಹಾಕಿಕೊಂಡು ಕುಳಿತಿದ್ದರು. ಅವರ ಈ ನಡೆ ಸಂವಿಧಾನಿಕ ವ್ಯವಸ್ಥೆಯ ವಿರುದ್ಧ ಯುದ್ಧ ಸಾರುವ, ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ದೂರಿದರು.
ನಕ್ಸಲರನ್ನು ಸಮರ್ಥನೆ ಮಾಡುವ ಧೋರಣೆಯಾಗಿದೆ. ಅಲ್ಲದೇ ಇದೇ ಕಾರ್ಯಕ್ರಮದಲ್ಲಿ ಸ್ವಾಮಿ ಅಗ್ನಿವೇಶ್ ಸಹ ತಾವೂ ಅರ್ಬನ್ ನಕ್ಸಲ್ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.