ADVERTISEMENT

‘ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ’

ರೈತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 6:53 IST
Last Updated 24 ಫೆಬ್ರುವರಿ 2024, 6:53 IST
<div class="paragraphs"><p>ತುಮಕೂರಿನಲ್ಲಿ ಶುಕ್ರವಾರ ಪಂಜಾಬ್‌– ಹರಿಯಾಣ ಗಡಿಯಲ್ಲಿ ರೈತರು ಮತ್ತು ಪೊಲೀಸರ ಮಧ್ಯೆ ನಡೆದ ಸಂಘರ್ಷದಲ್ಲಿ ಮೃತಪಟ್ಟ ಯುವ ರೈತ&nbsp;ಶುಭಕರನ್ ಸಿಂಗ್‌</p></div>

ತುಮಕೂರಿನಲ್ಲಿ ಶುಕ್ರವಾರ ಪಂಜಾಬ್‌– ಹರಿಯಾಣ ಗಡಿಯಲ್ಲಿ ರೈತರು ಮತ್ತು ಪೊಲೀಸರ ಮಧ್ಯೆ ನಡೆದ ಸಂಘರ್ಷದಲ್ಲಿ ಮೃತಪಟ್ಟ ಯುವ ರೈತ ಶುಭಕರನ್ ಸಿಂಗ್‌

   

ತುಮಕೂರು: ಕೇಂದ್ರ ಸರ್ಕಾರ ನ್ಯಾಯ ಕೇಳಲು ಬಂದ ರೈತರ ಮೇಲೆ ಗುಂಡು ಹಾರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಸಂಚಾಲಕ ಸಿ.ಯತಿರಾಜು ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಪಂಜಾಬ್‌– ಹರಿಯಾಣ ಗಡಿಯಲ್ಲಿರುವ ಖನೌರಿಯಲ್ಲಿ ರೈತರು ಮತ್ತು ಪೊಲೀಸರ ಮಧ್ಯೆ ನಡೆದ ಸಂಘರ್ಷದಲ್ಲಿ ಮೃತಪಟ್ಟ ಯುವ ರೈತ ಶುಭಕರನ್ ಸಿಂಗ್‌ ಸಾವು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ, ಜೆಸಿಟಿಯು ಸಂಘಟನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ADVERTISEMENT

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ಒಳ್ಳೆಯ ದಿನಗಳನ್ನು ಕೊಡಿ ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ನ್ಯಾಯಯುತ ಹೋರಾಟದ ಮೇಲೆ ಸರ್ಕಾರ ನಿರಂತರವಾಗಿ ದಾಳಿ ನಡೆಸುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೆ ತರುವ ಮಾತನಾಡಿದ್ದ ಬಿಜೆಪಿ, ಈಗ ತನ್ನ ಮಾತು ಮರೆತಿದೆ. ಆಯೋಗದ ವರದಿ ಜಾರಿಗಾಗಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ದಾಳಿ ಮಾಡುತ್ತಿದೆ. ಕೇಂದ್ರ ಸರ್ಕಾರದ ದಮನಕಾರಿ ನೀತಿಗಳು ಇಲ್ಲಿಗೆ ನಿಲ್ಲಬೇಕು’ ಎಂದು ಆಗ್ರಹಿಸಿದರು.

ಜೆಸಿಟಿಯು ಸಂಚಾಲಕ ಗಿರೀಶ್‌, ಸಿಐಟಿಯು ಜಿಲ್ಲಾ ಖಜಾಂಚಿ ಎ.ಲೋಕೇಶ್, ಜನವಾದಿ ಮಹಿಳಾ ಸಂಘಟನೆಯ ಕಲ್ಪನಾ, ರಾಜ್ಯ ರೈತ ಸಂಘದ ರವೀಶ್, ಮುಖಂಡರಾದ ವಾಸೀಂ ಅಕ್ರಂ, ರಂಗಧಾಮಯ್ಯ, ಖಲೀಲ್, ನಾಗರಾಜು, ನೇತ್ರಾ, ಜೋಹರ್, ಮುದಸಿರ್, ಲಕ್ಷ್ಮಿಕಾಂತ್, ಹನುಮಂತಯ್ಯ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.