ADVERTISEMENT

ತುಮಕೂರು ವಿವಿ ಕುಲಸಚಿವರ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 14:28 IST
Last Updated 25 ಸೆಪ್ಟೆಂಬರ್ 2024, 14:28 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

– ಪ್ರಜಾವಾಣಿ ಚಿತ್ರ

ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ಸುತ್ತೋಲೆ ಹೊರಡಿಸಿದ್ದ ವಿಶ್ವವಿದ್ಯಾಲಯ ಕುಲಸಚಿವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ನಾಗರಿಕರ ಸಮಿತಿ, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ADVERTISEMENT

‘ಸುತ್ತೋಲೆಯಲ್ಲಿ ಹಿಂದೂ ಮಹಾಗಣಪತಿಯ ಆಯೋಜಕರಿಗೆ ಸಮಾಜ ಘಾತಕರು, ಕೋಮು ದ್ವೇಷ ಹರಡುವವರು ಹಾಗೂ ಕಿಡಿಗೇಡಿಗಳು ಎಂದು ಉಲ್ಲೇಖಿಸಿದ್ದಾರೆ. ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ. ನಗರ ಠಾಣೆಯ ಪೊಲೀಸ್‌ ಅಧಿಕಾರಿ, ಕುಲಸಚಿವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ವಿಶ್ವ ಹಿಂದೂ ಪರಿಷತ್‌ ಮುಖಂಡ ಜಿ.ಕೆ.ಶ್ರೀನಿವಾಸ್‌ ಆಗ್ರಹಿಸಿದರು.

ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ನಾವು ಹೇಳದಿದ್ದರೂ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ಯಾವುದೇ ಗಲಾಟೆ, ಗದ್ದಲ ಇಲ್ಲದಂತೆ ಹಬ್ಬ ಆಚರಿಸುತ್ತಿದ್ದೇವೆ ಎಂದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.