ADVERTISEMENT

ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ

ತುರ್ತು ಪರಿಸ್ಥಿತಿ ಜಾರಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 5:03 IST
Last Updated 25 ಜೂನ್ 2024, 5:03 IST
ತುಮಕೂರಿನಲ್ಲಿ ಸೋಮವಾರ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಮುಖಂಡರಾದ ಎಚ್.ಎನ್.ಚಂದ್ರಶೇಖರ್, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಬೆಳ್ಳಿ ಲೋಕೇಶ್ ಇತರರು ಪಾಲ್ಗೊಂಡಿದ್ದರು
ತುಮಕೂರಿನಲ್ಲಿ ಸೋಮವಾರ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಮುಖಂಡರಾದ ಎಚ್.ಎನ್.ಚಂದ್ರಶೇಖರ್, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಬೆಳ್ಳಿ ಲೋಕೇಶ್ ಇತರರು ಪಾಲ್ಗೊಂಡಿದ್ದರು   

ತುಮಕೂರು: ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ಖಂಡಿಸಿ ಸೋಮವಾರ ನಗರದ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ನಗರದ ಭದ್ರಮ್ಮ ವೃತ್ತದಿಂದ ಪ್ರತಿಭಟನೆ ಆರಂಭಿಸಿ, ಪೋಸ್ಟರ್‌ ಹಿಡಿದು ಕಾಂಗ್ರೆಸ್ ಕಚೇರಿಯತ್ತ ನುಗ್ಗಿದರು. ಕಾಂಗ್ರೆಸ್‌ ಕಚೇರಿಗೆ ಪೋಸ್ಟರ್ ಅಂಟಿಸಲು ಮುಂದಾದ ಮುಖಂಡರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಬಿಗಡಾಯಿಸಿದಾಗ ಪ್ರತಿಭಟನಕಾರರನ್ನು ವಶಕ್ಕೆ ಪಡೆಯಲಾಯಿತು.

‘ಇಂದಿರಾ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡಿದ್ದರು. ಕಾಂಗ್ರೆಸ್‍ನ ಈ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನೀತಿಯನ್ನು ಭಾರತೀಯರು ಎಂದೂ ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷ ಜೂನ್‌ 25 ಬಂದರೆ ರಾಷ್ಟ್ರದ ಇತಿಹಾಸಕ್ಕೆ ಅಂಟಿದ ಕಪ್ಪು ಛಾಯೆ ನೆನಪಾಗುತ್ತದೆ. ಕಾಂಗ್ರೆಸ್‌ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್‍ಗೌಡ, ಗಂಗರಾಜು, ಮುಖಂಡರಾದ ಎಸ್.ಪಿ.ಚಿದಾನಂದ್, ಎಚ್.ಎನ್.ಚಂದ್ರಶೇಖರ್, ಹನುಮಂತರಾಜು, ಕೆ.ವೇದಮೂರ್ತಿ, ಆಂಜನಪ್ಪ, ಹನುಮಂತರಾಯಪ್ಪ, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಬೆಳ್ಳಿ ಲೋಕೇಶ್, ಗಣೇಶ್‍ಪ್ರಸಾದ್, ಪುರುಷೋತ್ತಮ್, ಗಂಗಾಧರ್, ವೆಂಕಟೇಶಾಚಾರ್‌ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.