ಹುಳಿಯಾರು: ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ಉತ್ತಮ ಮಳೆಯಾಗಿದ್ದು, ತೋಟ ಹಾಗೂ ಹಳ್ಳಗಳಲ್ಲಿ ನೀರು ಶೇಖರಣೆಯಾಗಿದೆ. ನಾಲ್ಕೈದು ದಿನಗಳಿಂದ ಹದ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಇಮ್ಮಡಿಗೊಳಿಸಿದೆ.
ಹುಳಿಯಾರು ಪಟ್ಟಣ ಸೇರಿದಂತೆ ಸುತ್ತಮುತ್ತ ಉತ್ತಮ ಮಳೆಯಾಗಿದೆ. ನಂದಿಹಳ್ಳಿ, ದವನದ ಹೊಸಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹಳ್ಳಗಳಲ್ಲಿ ನೀರು ಹರಿದು ಚಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ. ಇದರಿಂದ ಪೂರ್ವ ಮುಂಗಾರು ಬಿತ್ತನೆಗೆ ಅಡಚಣೆ ಆಗುತ್ತಿದೆ. ರೈತರು ಹೊಲಗಳನ್ನು ಸ್ವಚ್ಛಗೊಳಿಸಲು ಹಾಗೂ ಬಿತ್ತನೆ ಮಾಡಲು ಸಮಸ್ಯೆ ಎದುರಾಗಿದೆ. ಆದರೆ ತೆಂಗು-ಅಡಿಕೆ ತೋಟಗಳಿಗೆ ನೀರು ಬರುತ್ತಿರುವುದು ಅನುಕೂಲವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.