ADVERTISEMENT

ತುಮಕೂರು: ‘ಇ-ಶ್ರಮ್’ ಕಾರ್ಮಿಕರಿಗೆ ಪಡಿತರ ಚೀಟಿ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 4:08 IST
Last Updated 7 ನವೆಂಬರ್ 2024, 4:08 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ತುಮಕೂರು: ‘ಇ–ಶ್ರಮ್’ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ADVERTISEMENT

ಕಾರ್ಮಿಕರ ಸಮಸ್ಯೆ ಚರ್ಚಿಸಲು ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಕಾರ್ಮಿಕರಿಗೆ ಪಡಿತರ ಚೀಟಿ ವಿತರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅದರಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಇ-ಶ್ರಮ್ ನೋಂದಾಯಿತ 1,201 ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ ಮಾಡಲಾಗಿದೆ. ಬಾಕಿ ಉಳಿದ 4,025 ಕಾರ್ಮಿಕರಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಣೆ ಮಾಡಬೇಕು ಎಂದು ಸೂಚಿಸಿದರು.

ಇ-ಶ್ರಮ್ ನೋಂದಾಯಿತ ಕಾರ್ಮಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.