ADVERTISEMENT

ರೇವಣ್ಣ, ಪರಮೇಶ್ವರ ಅವರ ಹತ್ತಾರು ಅಕ್ರಮ ಬಯಲು ಮಾಡುವೆ: ಕೆ.ಎನ್‌.ರಾಜಣ್ಣ

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 7:14 IST
Last Updated 21 ಜುಲೈ 2019, 7:14 IST
   

ತುಮಕೂರು:ಕೆಎಂಎಫ್‌ ಅಧ್ಯಕ್ಷರಾಗಿದ್ದ ಎಚ್‌.ಡಿ.ರೇವಣ್ಣಹಾಗೂ ಡಿಸಿಎಂ ಜಿ. ಪರಮೇಶ್ವರ ಅವರ ಅಕ್ರಮಗಳನ್ನು ಬಯಲು ಮಾಡುವೆ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಅವರು ಇಬ್ಬರ ವಿರುದ್ಧ ವಾಗ್ದಾಳಿ ಮಾಡಿದರು.

ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌ ಮಾಡಿರುವ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ರಾಜಣ್ಣ, ರೇವಣ್ಣ ಮತ್ತು ಪರಮೇಶ್ವರ ಅವರ ಅಕ್ರಮಗಳ ಬಗ್ಗೆ ಹೇಳಿದರು.

‘ಎಚ್.ಡಿ.ರೇವಣ್ಣ ಕೆಎಂಎಫ್ ಅಧ್ಯಕ್ಷನಾಗಿದ್ದಾಗ ಸಾಕಷ್ಟು ಅಕ್ರಮ ಮಾಡಿದ್ದಾನೆ. ತನಿಖೆಯಾಗಿ ವರದಿ ಕೂಡಾ ಬಂದಿದೆ. ನೇಮಕಾತಿ, ಹಣ ದುರ್ಬಳಕೆ ಮಾಡಿಕೊಂಡಿದ್ದಾನೆ’ ಎಂದು ರಾಜಣ್ಣ ಆಪಾದಿಸಿದರು.

‘ಡಾ.ಜಿ.ಪರಮೇಶ್ವರ ಅವರು ನೆಲಮಂಗಲ ಸಮೀಪ ಬೇಗೂರಿನಲ್ಲಿ ಅರ್ಕಾವತಿ ಜಮೀನನ್ನು ಆಸ್ಪತ್ರೆ ಉದ್ದೇಶಕ್ಕೆ ಪಡೆದು ಹೊಟೇಲ್, ಕಾಂಪ್ಲೆಕ್ಸ್ ಕಟ್ಟಿದ್ದಾರೆ. ತುಮಕೂರಿನಲ್ಲಿ ಹೆಗ್ಗೆರೆ ಮೆಡಿಕಲ್ ಕಾಲೇಜು, ಮರಳೂರು ಸಮೀಪ ರಿಂಗ್ ರಸ್ತೆಯನ್ನೇ ಒತ್ತುವರಿ ಮಾಡಿದ್ದಾರೆ. ಇಂತಹ ಹತ್ತಾರು ಅಕ್ರಮಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ’ ಎಂದು ರಾಜಣ್ಣ ಹಲವು ಸಂಗತಿಗಳನ್ನು ಬಿಚ್ಚಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.