ADVERTISEMENT

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ತೆರೆಯಲು ಬಿಇಒಗೆ ಮನವಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 14:16 IST
Last Updated 9 ಮಾರ್ಚ್ 2024, 14:16 IST
ತುರುವೇಕೆರೆಯ ಎನ್‌ಎಚ್‌ಪಿಎಸ್ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ತೆರೆಯಲು ಅನಮತಿ ನೀಡಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬಿಇಒ ಎನ್.ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು
ತುರುವೇಕೆರೆಯ ಎನ್‌ಎಚ್‌ಪಿಎಸ್ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ತೆರೆಯಲು ಅನಮತಿ ನೀಡಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬಿಇಒ ಎನ್.ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು   

ತುರುವೇಕೆರೆ: ಪಟ್ಟಣದ ಬೇಟೆರಾಯ ದೇಗುಲ ಹಿಂಭಾಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ತೆರೆತಲು ಅನುಮತಿ ನೀಡಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಂಕರ್ ನೇತೃತ್ವದಲ್ಲಿ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್‌ಗೆ ಮನವಿ ಸಲ್ಲಿಸಿದರು.

ಈ ಶಾಲೆ 75 ವರ್ಷ ಪೂರೈಸಿದೆ. ಇಲ್ಲಿ ಕನ್ನಡ ಮಾಧ್ಯಮ ಇರುವುದರಿಂದ ಹಲವು ಪೋಷಕರು ಅವರ ಮಕ್ಕಳನ್ನು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ.

ಇದೇ ಶಾಲೆ ಮುಂಬರುವ ದಿನಗಳಲ್ಲಿ ಮುಚ್ಚಿ ಹೋಗುವ ಸಾಧ್ಯತೆಯೂ ಇದೆ. ಮುಕ್ಕಾಲು ಶತಮಾನ ಇರುವ ಶಾಲೆಯನ್ನು ಉಳಿಸಿಕೊಳ್ಳಲು ಶಾಲಾಭಿವೃದ್ಧಿ ಸಮಿತಿ, ಪೋಷಕರು ಮತ್ತು ಶಿಕ್ಷಕರು ಎಲ್‌ಕೆಜಿ ಮತ್ತು ಯುಕೆಜಿ ತರಗತಿ ತೆರೆಯುವುದು ಅನಿವಾರ್ಯ. ಕನ್ನಡದೊಂದಿಗೆ ಇಂಗ್ಲಿಷ್ ಮಾಧ್ಯಮವನ್ನೂ ನೀಡುವುದು ಅಗತ್ಯ ಎಂದು ಶಂಕರ್ ತಿಳಿಸಿದ್ದಾರೆ.

ADVERTISEMENT

ಈ ಭಾಗದಲ್ಲಿ ಸಾಕಷ್ಟು ಬಡ ವರ್ಗದ ಮಕ್ಕಳೇ ಇರುವುದರಿಂದ ಇಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಇಚ್ಚೆಯಿಂದ ಪೋಷಕರೇ ತಾತ್ಕಾಲಿಕವಾಗಿ ಶಿಕ್ಷಕರನ್ನು ನೇಮಿಸಿಕೊಂಡು ತರಗತಿ ನಡೆಸಿಕೊಂಡು ಹೋಗಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಎನ್‌ಎಚ್‌ಪಿಎಸ್ ಶಾಲೆಯ ಎಸ್‌ಡಿಎಂಸಿ ಸದಸ್ಯರ ಮನವಿ ಮೇರೆಗೆ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತೆರೆಯಲು ಅವಕಾಶ ನೀಡಲಾಗುವುದು. ಸರ್ಕಾರದಿಂದ ಸೌಲಭ್ಯ ದೊರೆಯುವ ತನಕ ಪೋಷಕರೇ ಜವಾಬ್ದಾರಿ ಮೇರೆಗೆ ತರಗತಿ ಪ್ರಾರಂಭಿಸುವುದಕ್ಕೆ  ವಿರೋಧವಿಲ್ಲ ಎಂದು ಬಿಇಒ ಸೋಮಶೇಖರ್ ಅವರು ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.