ADVERTISEMENT

ಕೆಆರ್‌ಎಸ್‌ ಅಭ್ಯರ್ಥಿ ಬೆಂಬಲಿಸಲು ಮನವಿ

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 6:13 IST
Last Updated 1 ಜೂನ್ 2024, 6:13 IST
ಗಜೇಂದ್ರಕುಮಾರ್‌ ಗೌಡ
ಗಜೇಂದ್ರಕುಮಾರ್‌ ಗೌಡ   

ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಭ್ಯರ್ಥಿ ಎಂ.ಜಿ.ಕಿಶನ್‌ ಅವರನ್ನು ಬೆಂಬಲಿಸುವಂತೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗಜೇಂದ್ರಕುಮಾರ್‌ ಗೌಡ ಇಲ್ಲಿ ಶುಕ್ರವಾರ ಮನವಿ ಮಾಡಿದರು.

ಜನರ ದೇಣಿಗೆಯಿಂದ ಕೆಆರ್‌ಎಸ್‌ ಪಕ್ಷ ನಡೆಯುತ್ತಿದೆ. ರಾಜ್ಯದಲ್ಲಿ ಏಕೈಕ ಪ್ರಾದೇಶಿಕ ಪಕ್ಷವಾಗಿ ಉಳಿದುಕೊಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿದ್ಯಾವಂತರು, ಶಿಕ್ಷಕರು ಪಕ್ಷದ ಅಭ್ಯರ್ಥಿಗೆ ಮತ‌ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಕೇಳಿಕೊಂಡರು.

ರಾಜ್ಯದಲ್ಲಿ ಖಾಲಿ ಇರುವ 3 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡು ತನ್ನ ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದೆ. ಶಿಕ್ಷಕರು ಯಾವುದೇ ಆಸೆ- ಆಮಿಷಗಳಿಗೆ ಬಲಿಯಾಗಬಾರದು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಶಿಕ್ಷಕರಿಗೆ ಸಮಾಜದ ಎಲ್ಲರು ಗೌರವ ನೀಡುತ್ತಾರೆ. ಉತ್ತಮ ಸಮಾಜ ನಿರ್ಮಾಣಕ್ಕೆ, ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದು ಸಲಹೆ ಮಾಡಿದರು.

ADVERTISEMENT

ಈಗಿ‌ನ ವಿಧಾನ ಪರಿಷತ್ತಿನ ಸದಸ್ಯರು ಶಿಕ್ಷಕರ ಏಳಿಗೆ, ಶ್ರೇಯೋಭಿವೃದ್ಧಿಗೆ ದುಡಿಯುತ್ತಿಲ್ಲ. ಹೀಗಾಗಿ ಎಲ್ಲರು ಯೋಚಿಸಿ ತಮ್ಮ ಹಕ್ಕು ಚಲಾಯಿಸಿಬೇಕು. ಕೆಆರ್‌ಎಸ್‌ ಅಭ್ಯರ್ಥಿ ಶಿಕ್ಷಣ ಕ್ಷೇತ್ರದ ಸಮಗ್ರ ಬದಲಾವಣೆಗೆ ಪ್ರಯತ್ನಿಸುತ್ತಿದ್ದಾರೆ. ಎಲ್ಲ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವ ಕನಸು ಕಂಡಿದ್ದಾರೆ. ಎಲ್ಲರು ಎಂ.ಜಿ.ಕಿಶನ್‌ ಅವರಿಗೆ ಮತ ನೀಡಿ ಗೆಲುವಿಗೆ ಸಹಕರಿಸಿ ಎಂದು ಹೇಳಿದರು.

ಕೆಆರ್‌ಎಸ್‌ ಪದಾಧಿಕಾರಿಗಳಾದ ಡಿ.ಸಿ.ಜಯಂತ್, ವಿ.ಎ.ಆನಂದ್, ರವಿಕುಮಾರ್, ರಾಜೇಶ್, ಗುರುಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.