ADVERTISEMENT

ತುಮಕೂರು: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 7:21 IST
Last Updated 28 ಅಕ್ಟೋಬರ್ 2024, 7:21 IST
   

ತುಮಕೂರು: ತಾಲ್ಲೂಕಿನ ಮಂದಾರಗಿರಿ ಬಳಿಯ ಮೈದಾಳದ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ನಗರದ ಎಸ್‌ಐಟಿ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಂಸಾ (20) ಭಾನುವಾರ ಕೆರೆಯ ಕೋಡಿಯಲ್ಲಿ ಫೋಟೊ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು, ಕೊಚ್ಚಿಕೊಂಡು ಹೋಗಿದ್ದರು. ರಾತ್ರಿ ಎಂಟು ಗಂಟೆಯವರೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಸಿಬ್ಬಂದಿ ಸೋಮವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದ್ದರು.

ಹತ್ತಕ್ಕೂ ಹೆಚ್ಚು ಜನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಕೋಡಿ ನೀರು ಹರಿಯುವ ಮಾರ್ಗದಲ್ಲಿದ್ದ ಬಂಡೆಯ ಕೆಳಗೆ ವಿದ್ಯಾರ್ಥಿನಿಯನ್ನು ರಕ್ಷಿಸಿ ಕರೆ ತಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.