ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮ ಪಂಚಾಯಿತಿಯ ಕಾಚಿಹಳ್ಳಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿದ್ದು, ಮಳೆಗಾಲವಾದ್ದರಿಂದ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಾಚಿಹಳ್ಳಿಯ ನೂರು ಮೀಟರ್ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳು ಕಾವೇರಿ ನೀರಾವರಿ ನಿಗಮ ಅನುದಾನದಲ್ಲಿ ಪ್ರಾರಂಭವಾಗಿದ್ದು. ಕೆಲ ಮುಖಂಡರ ಆರೋಪದ ಮೇರೆಗೆ ಇಪ್ಪತ್ತು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಮಳೆಗೆ ರಸ್ತೆ ಕೆಸರುಗದ್ದೆಯಾಗಿದ್ದು ಸಂಚರಿಸಲು ಯೋಗ್ಯವಿಲ್ಲದಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಮಹಾಲಕ್ಷ್ಮಮ್ಮ, ಗ್ರಾಮಸ್ಥರಾದ ಶಿವಲಿಂಗಯ್ಯ, ಚನ್ನೆಗೌಡ ಆರೋಪಿಸಿದ್ದಾರೆ.
ಈ ಭಾಗದಲ್ಲಿ ನಿತ್ಯ ನೂರಾರು ವಿದ್ಯಾರ್ಥಿಗಳು, ರೇಷ್ಮೆ ಬೆಳೆಗಾರರು ಸಂಚರಿಸುತ್ತಿದ್ದಾರೆ. ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಶಾಸಕರು ಗಮನ ಹರಿಸಿ ಕಾಮಗಾರಿ ಮುಂದುವರೆಸಲು ಸೂಚನೆ ನೀಡುವ ಮೂಲಕ ಕಾಮಗಾರಿ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಅನುಕೂಲಮಾಡಿಕೊಡಲು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.