ತುಮಕೂರು: ನಗರ ವ್ಯಾಪ್ತಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದರು.
84 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ, ಮನೆಗಳಲ್ಲಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದರು. ನಂತರ 54 ಮಂದಿಯನ್ನು ಪರೇಡ್‌ಗೆ ಒಳಪಡಿಸಲಾಯಿತು.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಗಲಭೆ, ಘರ್ಷಣೆಯಂತಹ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಈ ಹಿಂದೆ ವಿವಿಧ ಪ್ರಕರಣದಲ್ಲಿ ಭಾಗಿಯಾಗಿರುವ ರೌಡಿ ಶೀಟರ್‌ಗಳ ಪರೇಡ್ ನಡೆಸಿ, ಎಚ್ಚರಿಕೆ ನೀಡಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಮತ್ತು ನಗರ ಡಿವೈಎಸ್‌ಪಿ ಶ್ರೀನಿವಾಸ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡಗಳಿಂದ ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಯಿತು.
ಪರಿವರ್ತನೆಯಾದವರನ್ನು ರೌಡಿ ಶೀಟರ್ ಪಟ್ಟಿಯಿಂದ ತೆಗೆಯುವ ಕೆಲಸ ಮಾಡಲಾಗುತ್ತದೆ. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಪೂರವಾಡ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.