ADVERTISEMENT

ತುಮಕೂರು | ಜನವರಿ 21ಕ್ಕೆ ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 9:24 IST
Last Updated 19 ಜನವರಿ 2024, 9:24 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಂಸರಣೋತ್ಸವ ಜ. 21ರಂದು ಕ್ಯಾತ್ಸಂದ್ರದ ಮಠದ ಆವರಣದಲ್ಲಿ ನಡೆಯಲಿದ್ದು, ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು, ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು (ಜ.21) ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ. ಮಠದಲ್ಲೂ ಪುಣ್ಯ ಸ್ಮರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಾನುವಾರ ಮುಂಜಾನೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಶಿವಕುಮಾರ ಸ್ವಾಮೀಜಿ ಪುತ್ಥಳಿಯ ಮೆರವಣಿಗೆ ಮಾಡಲಾಗುತ್ತದೆ. ನಂತರ ವೇದಿಕೆ ಕಾರ್ಯಕ್ರಮ ಇರುತ್ತದೆ. ಬರುವ ಎಲ್ಲಾ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಬಸವೇಶ್ವರರನ್ನು ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಣೆ ಮಾಡಿರುವುದನ್ನು ಸ್ವಾಮೀಜಿ ಸ್ವಾಗತಿಸಿದರು. ಬಸವಣ್ಣ ಕೇವಲ ಸಾಂಸ್ಕೃತಿಕ ಕ್ಷೇತ್ರಕ್ಕಷ್ಟೇ ಅಲ್ಲ, ಅಧ್ಯಾತ್ಮ, ಧಾರ್ಮಿಕ, ಆರ್ಥಿಕ ವಿಚಾರದಲ್ಲಿ ಸಮಗ್ರ ವ್ಯಕ್ತಿತ್ವ ಹೊಂದಿದವರು. ಯಾವುದೇ ಗೌರವ, ಸ್ಥಾನ ಕೊಟ್ಟರು ಅದು ಕಡಿಮೆ. ಕರ್ನಾಟಕಕ್ಕೆ ಅಷ್ಟೇ ಅಲ್ಲ, ಇಡೀ ಜಗತ್ತಿಗೆ ಬೇಕಾದಂತಹ ಸಮಾನತೆ, ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ರೂಪಿಸಿ ಕೊಟ್ಟಿದ್ದಾರೆ. ದೇಶದಲ್ಲಿ ಮೊದಲಿಗೆ ಪ್ರಜಾಪ್ರಭುತ್ವದ ಬೀಜಗಳನ್ನು ಬಿತ್ತಿದವರು ಎಂದು ಸ್ಮರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.