ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಹುಟ್ಟುಹಬ್ಬದ ಪ್ರಯುಕ್ತ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು.
ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಬಂದಿದ್ದ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.
ರಾಜ್ಯದ ಬೀದರ್, ರಾಯಚೂರು ಸೇರಿದಂತೆ ಎಲ್ಲಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ ಜಯಣ್ಣ ಹೇಳಿದರು.
ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು ಮೂರು ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಸದಸ್ಯೆ ಅನುರಾಧ ವಿ.ಪಾಟೀಲ ಹೇಳಿದರು.
ಮುಸ್ಲಿಂ ಮಗುವಿಗೆ ಶಿವಮಣಿ ಎಂದು ನಾಮಕರಣ
ತುಮಕೂರಿನ ಕ್ಯಾತ್ಸಂದ್ರದಮುಸ್ಲಿಂ ದಂಪತಿ ಶಾಹಿಸ್ತಾ ಮತ್ತು ಜಮೀರ್ ತಮ್ಮ ಮಗಳಿಗೆ ಶಿವಮಣಿ ಎಂದು ನಾಮಕರಣ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.