ADVERTISEMENT

ತುಮಕೂರು: ಇಂದು ನಗರದಲ್ಲಿ ಸಿದ್ದರಾಮಯ್ಯ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 5:30 IST
Last Updated 23 ಏಪ್ರಿಲ್ 2024, 5:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಸೋಮವಾರ ತಿಳಿಸಿದರು.

ನಗರದ ಯಲ್ಲಾಪುರದಲ್ಲಿ ಸಂಜೆ 4.30 ಗಂಟೆಗೆ ನಡೆಯುವ ಸಭೆಯಲ್ಲಿ ಭಾಗವಹಿಸಿ ಪ್ರಚಾರ ಮಾಡಲಿದ್ದಾರೆ. ತುಮಕೂರು ನಗರ, ಗ್ರಾಮಾಂತರ, ಕೊರಟಗೆರೆ, ಮಧುಗಿರಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈಗಾಗಲೇ ಮತದಾನ ನಡೆದಿರುವ ಕಡೆಗಳಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಹೆಚ್ಚಿನ ಸ್ಥಾನಗಳು ಬರಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದನ್ನೇ ಆಧಾರವಾಗಿ ಇಟ್ಟುಕೊಂಡರೆ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆದ್ದು, ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ಗೌಡ, ಮುಖಂಡರಾದ ಆರ್.ರಾಮಕೃಷ್ಣ, ಷಫಿ ಅಹಮದ್, ರಫಿಕ್ ಅಹಮದ್, ಇಕ್ಬಾಲ್ ಅಹಮದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.