ADVERTISEMENT

ಬಿಜೆಪಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ಸ್ಪರ್ಧೆ ಖಚಿತ: ಸೊಗಡು ಶಿವಣ್ಣ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2023, 13:43 IST
Last Updated 13 ಏಪ್ರಿಲ್ 2023, 13:43 IST
ಸೊಗಡು ಶಿವಣ್ಣ
ಸೊಗಡು ಶಿವಣ್ಣ   

ತುಮಕೂರು: ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿ ಹೊರ ಬಂದಿದ್ದು, ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ.

‘ಸ್ವತಂತ್ರವಾಗಿ ಸ್ಪರ್ಧಿಸಬೇಕೆ ಅಥವಾ ಯಾವುದಾದರೂ ಪಕ್ಷದಿಂದ ಸ್ಪರ್ಧಿಸಬೇಕೆ ಎಂಬ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕೆಲವು ರಾಜಕೀಯ ಪಕ್ಷಗಳ ಮುಖಂಡರು ಸಂಪರ್ಕ ಮಾಡಿದ್ದಾರೆ. ಆದರೆ ಜೀವ ಇರುವವರೆಗೂ ಕಾಂಗ್ರೆಸ್‌ಗೆ ಹೋಗುವುದಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಿಜೆಪಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪಕ್ಷದಲ್ಲಿ ಅಸಹ್ಯ ಹುಟ್ಟಿಸುವಂತಹ ವರ್ತನೆಗಳು ಕಂಡು ಬರುತ್ತಿವೆ. ಜನರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ಬಿಜೆಪಿಯಲ್ಲಿ ಎಲ್ಲರೂ ಅಲಿ ಬಾಬಾ ಕಳ್ಳರಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ADVERTISEMENT

‘ನನಗೆ ಟಿಕೆಟ್ ಕೈ ತಪ್ಪಲು ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್‌ಗೌಡ ನೇರ ಕಾರಣ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.