ADVERTISEMENT

ತುಮಕೂರು | ಸಚಿವರಿಂದ ಅಧಿಕಾರಿಗಳ ತರಾಟೆ

ಸೋಮಣ್ಣ, ರೈಲು ನಿಲ್ದಾಣಕ್ಕೆ ಭೇಟಿ- ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 3:03 IST
Last Updated 17 ಜೂನ್ 2024, 3:03 IST
ತುಮಕೂರು ರೈಲು ನಿಲ್ದಾಣಕ್ಕೆ ಭಾನುವಾರ ಕೇಂದ್ರದ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಇತರರು ಹಾಜರಿದ್ದರು
ತುಮಕೂರು ರೈಲು ನಿಲ್ದಾಣಕ್ಕೆ ಭಾನುವಾರ ಕೇಂದ್ರದ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಇತರರು ಹಾಜರಿದ್ದರು   

ತುಮಕೂರು: ನಗರದ ರೈಲ್ವೆ ನಿಲ್ದಾಣಕ್ಕೆ ಭಾನುವಾರ ಕೇಂದ್ರದ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಅಲ್ಲಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು.

ನಿಲ್ದಾಣದ ಶೌಚಾಲಯದ ದುರ್ವಾಸನೆ, ದುಸ್ಥಿತಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶೌಚಾಲಯ ಸ್ವಚ್ಛವಾಗಿಡಲು ಸೂಚನೆ ನೀಡಿದರು.

‘ನಗರದಿಂದ ಬೆಂಗಳೂರಿಗೆ ಹೆಚ್ಚುವರಿ ರೈಲು ಬಿಡಬೇಕು, ಸಾಮಾನ್ಯ ಬೋಗಿಗಳ ಸಂಖ್ಯೆ ಹೆಚ್ಚಿಸಬೇಕು. ರೈಲ್ವೆ ಹಳಿಯ ಎರಡು ಕಡೆ ತಡೆಗೋಡೆ ನಿರ್ಮಿಸುತ್ತಿದ್ದು, ಇದರಿಂದ ಶಾಂತಿನಗರ ಸೇರಿದಂತೆ ಸುತ್ತಮುತ್ತಲಿನ ಜನರಿಗೆ ಸಮಸ್ಯೆಯಾಗುತ್ತಿದೆ. ಈ ಭಾಗದಲ್ಲಿ ಮೇಲ್ಸೇತುವೆ ಅಥವಾ ಕೆಳಸೇತುವೆ ನಿರ್ಮಿಸಬೇಕು’ ಎಂದು ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.

ADVERTISEMENT

ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಮುಖಂಡರಾದ ಎಚ್‌.ಎಸ್‌.ರವಿಶಂಕರ್‌, ಸೊಗಡು ಶಿವಣ್ಣ, ನೆ.ಲ.ನರೇಂದ್ರಬಾಬು, ಗಿರಿಜಾ ಧನಿಯಾಕುಮಾರ್‌ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.