ADVERTISEMENT

ತುಮಕೂರು | ‘ಶಿಕ್ಷಕರಿಂದ ಕ್ರೀಡಾಕೂಟ ಬಹಿಷ್ಕಾರದ ಎಚ್ಚರಿಕೆ‘

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 3:06 IST
Last Updated 17 ಜೂನ್ 2024, 3:06 IST
<div class="paragraphs"><p>ತುಮಕೂರಿನಲ್ಲಿ ಶನಿವಾರ&nbsp;ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ವೈದ್ಯನಾಥನ್‌ ವರದಿ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು</p></div>

ತುಮಕೂರಿನಲ್ಲಿ ಶನಿವಾರ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ವೈದ್ಯನಾಥನ್‌ ವರದಿ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು

   

ತುಮಕೂರು: ವೈದ್ಯನಾಥನ್‌ ವರದಿ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಶನಿವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ ಅವರಿಗೆ ಮನವಿ ಸಲ್ಲಿಸಲಾಯಿತು.

‘ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವುದು, ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯ ಕಲ್ಪಿಸಬೇಕು. ಮುಖ್ಯ ಶಿಕ್ಷಕರ ಮುಂಬಡ್ತಿ ನೀಡಬೇಕು. ಈ ಹಿಂದೆ ಸರ್ಕಾರ ನೇಮಿಸಿದ್ದ ವೈದ್ಯನಾಥನ್ ಸಮಿತಿ ಶಿಫಾರಸು ಯಥಾವತ್ತಾಗಿ ಜಾರಿ ಮಾಡಬೇಕು. ಇಲ್ಲದಿದ್ದರೆ ಪ್ರಸಕ್ತ ಸಾಲಿನ ಎಲ್ಲಾ ಕ್ರೀಡಾಕೂಟಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್‌.ಶಿವಕುಮಾರ್‌ ಹೇಳಿದರು.

ADVERTISEMENT

ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಭರವಸೆ ಈಡೇರಿಸುವ ಮಾತುಗಳು ಕೇಳಿ ಬರುತ್ತವೆ. ಇಲಾಖೆಯ ಕ್ರೀಡಾಕೂಟಗಳು ಮುಗಿದರೆ, ಭರವಸೆಯ ಮಾತು ಮರೆತು ಬಿಡುತ್ತಾರೆ. ಈ ಬಾರಿ ಹೋರಾಟದ ಹಾದಿ ತುಳಿಯುವುದು ಅನಿವಾರ್ಯವಾಗಿದೆ ಎಂದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಚ್‌.ಆರ್‌.ಗಂಗಾಧರಯ್ಯ, ಟಿ.ವೈ.ಸುರೇಶ್‌, ಸತ್ಯನಾರಾಯಣ, ಅನಂತು, ಲೋಕಾನಂದ್, ಪ್ರಭು, ಮಹಾವೀರ್, ಚಿಕ್ಕಣ್ಣ, ನರಸಿಂಹ ಮೂರ್ತಿ, ಪಾಲಾಕ್ಷಪ್ಪ, ಷಡಕ್ಷರಯ್ಯ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.