ADVERTISEMENT

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ನೋಟಿಸ್‌ ಜಾರಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 5:09 IST
Last Updated 21 ಏಪ್ರಿಲ್ 2024, 5:09 IST

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನದ ಗೌಪ್ಯತೆ ಕಾಪಾಡದೇ, ಸಾಮಾಜಿಕ ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿಆರ್‌ಸಿ) ಟಿ.ಆರ್.ಗಾಯತ್ರಿ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಮೌಲ್ಯಮಾಪನ ಕೇಂದ್ರಗಳ ಮೇಲಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಬೇರೆ ಜಿಲ್ಲೆಗಳಿಂದ ಬಂದ ಉತ್ತರ ಪತ್ರಿಕೆಗಳ ಮಾಹಿತಿ, ಚಿತ್ರಗಳನ್ನು ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಗೌಪ್ಯವೆಂದು ತಿಳಿದಿದ್ದರೂ ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ ಹಂಚಿಕೊಂಡು, ಗೌಪ್ಯತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT