ADVERTISEMENT

ತುಮಕೂರು: ಸೆಲ್ಫಿ ತೆಗೆದುಕೊಳ್ಳುವಾಗ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 3:09 IST
Last Updated 28 ಅಕ್ಟೋಬರ್ 2024, 3:09 IST
<div class="paragraphs"><p>ಸೆಲ್ಫಿ ತೆಗೆದುಕೊಳ್ಳುವಾಗ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿ: ರಕ್ಷಣಾ ಕಾರ್ಯ‌ ಚುರುಕು</p></div>

ಸೆಲ್ಫಿ ತೆಗೆದುಕೊಳ್ಳುವಾಗ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿ: ರಕ್ಷಣಾ ಕಾರ್ಯ‌ ಚುರುಕು

   

ತುಮಕೂರು: ತಾಲ್ಲೂಕಿನ ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಹಂಸ (20) ರಕ್ಷಣಾ ಕಾರ್ಯ ಸೋಮವಾರ ಬೆಳಿಗ್ಗೆ ಪುನರ್ ಆರಂಭವಾಗಿದೆ.

ಕೋಡಿ ಹರಿಯುವ ಕಡೆ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆಯ ಮಧ್ಯೆ ಸಿಲುಕಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಶಂಕಿಸಿದ್ದು, ಹತ್ತಕ್ಕೂ ಹೆಚ್ಚು ಜನ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ಕೋಡಿ ನೀರು ರಭಸವಾಗಿ ಹರಿಯುತ್ತಿದ್ದು, ಇದರ ಮಧ್ಯೆ ಅಗ್ನಿಶಾಮಕ ದಳದ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ನಗರದ ಎಸ್ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿರುವ ಹಂಸ, ಗುಬ್ಬಿ ತಾಲ್ಲೂಕಿನ ಶಿವರಾಂಪುರದ ನಿವಾಸಿ. ಗೆಳತಿಯರ ಜತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ಹೋದಾಗ ಮೈದಾಳ ಕೆರೆ ಕೋಡಿ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕೊಚ್ಚಿಕೊಂಡು ಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.