ADVERTISEMENT

ತುಮಕೂರು: ಪರಿಸರ ಸ್ನೇಹಿ ವಸ್ತು ಬಳಕೆಗೆ ಸಲಹೆ

ವನ ಮಹೋತ್ಸವ, ಕರ್ನಾಟಕ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 2:46 IST
Last Updated 23 ನವೆಂಬರ್ 2024, 2:46 IST
ತುಮಕೂರಿನಲ್ಲಿ ಶುಕ್ರವಾರ ನಡೆದ ವನ ಮಹೋತ್ಸವ, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ, ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ, ಉಪಾಧ್ಯಕ್ಷ ಸಿ.ಯತಿರಾಜ್ ಇತರರು ಹಾಜರಿದ್ದರು
ತುಮಕೂರಿನಲ್ಲಿ ಶುಕ್ರವಾರ ನಡೆದ ವನ ಮಹೋತ್ಸವ, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ, ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ, ಉಪಾಧ್ಯಕ್ಷ ಸಿ.ಯತಿರಾಜ್ ಇತರರು ಹಾಜರಿದ್ದರು   

ತುಮಕೂರು: ಅರಣ್ಯ ನಾಶದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಜೀವಸಂಕುಲ ಅಳಿವಿನಂಚಿಗೆ ತಲುಪಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ಹೇಳಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ, ಮಹಾನಗರ ಪಾಲಿಕೆ, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಅರಣ್ಯ ಇಲಾಖೆ, ತುಮಕೂರು ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ‘ವನ ಮಹೋತ್ಸವ, ಕರ್ನಾಟಕ ರಾಜ್ಯೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯನ ಸ್ವಾರ್ಥಕ್ಕೆ ಅರಣ್ಯ ನಾಶವಾಗುತ್ತಿದೆ. ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಸ್ನೇಹಿ ವಸ್ತು ಬಳಸುವ ಮೂಲಕ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದರು.

ADVERTISEMENT

ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ, ‘ಅತಿಯಾದ ಕೈಗಾರಿಕೆ, ಗಣಿಗಾರಿಕೆಯಿಂದ ಪರಿಸರ ಮಲಿನವಾಗುತ್ತಿದೆ. ಕೈಗಾರಿಕೀಕರಣವು ಜಿಲ್ಲೆಯ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಸಿರೀಕರಣ ಹೆಚ್ಚಳಕ್ಕೆ ಎಲ್ಲರು ಮುಂದಾಗಬೇಕು’ ಎಂದು ತಿಳಿಸಿದರು.

ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದ ಕೆ.ಆರ್.ಶ್ರೀಹರ್ಷ, ಮಾಲಿನ್ಯ ನಿಯಂತ್ರಣಾ ಮಂಡಳಿಯ ದಾವಣಗೆರೆ ವಲಯ ಕಚೇರಿ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ.ನಾಯಕ್‌, ಸಾಮಾಜಿಕ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ವಿ.ದೇವರಾಜ್‌, ಪೃಥ್ವಿರಾಜ್ ಎಸ್.ಲಕ್ಕಿ, ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ, ಉಪಾಧ್ಯಕ್ಷ ಸಿ.ಯತಿರಾಜ್, ಬೆಳಗಾವಿ ಡಿಸಿಪಿ (ಸಿಎಆರ್) ಸಿದ್ದನಗೌಡ ವೈ.ಪಾಟೀಲ್‌, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್‌ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.