ತುಮಕೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಗುರುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದರು.
ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರು ತೇಜಸ್ವಿ ಅವರನ್ನು ಆಶೀರ್ವದಿಸಿ ಮಠದ ವತಿಯಿಂದ ಸತ್ಕರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ, 'ಬಿಜೆಪಿ ಯುವಕರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುತ್ತದೆ. ಈ ಸಂಪ್ರದಾಯವನ್ನು ಮೊದಲಿನಿಂದಲೂ ಅನುಸರಿಸಿಕೊಂಡು ಬಂದಿದೆ. ನನ್ನನ್ನು ಗುರುತಿಸಿ ಪಕ್ಷದ ವರಿಷ್ಠರು ಅವಕಾಶ ಕೊಟ್ಟಿರುವುದೂ ಅದೇ ಮಾನದಂಡದಿಂದ. ಅರುಣ್ ಜೇಟ್ಲಿ, ಅನಂತಕುಮಾರ್ ಹೀಗೆ ಅನೇಕರಿಗೆ ರಾಜಕೀಯ ಅವಕಾಶಗಳು ಲಭಿಸಿದ್ದು ಯುವಕರಾಗಿದ್ದಾಗಲೇ,’ ಎಂದು ಹೇಳಿದರು.
‘ನನ್ನ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಯಾವುದೇ ಮುಖಂಡರು ಟೀಕೆ, ಹೇಳಿಕೆ ಕೊಟ್ಟರೂ ಸರಿ; ನಾನು ಅವರಿಂದ ಬಯಸುವುದು ಮಾರ್ಗದರ್ಶನ ಮಾತ್ರ. ಅವರೆಲ್ಲ ರಾಜಕೀಯದಲ್ಲಿ ಹಿರಿಯರು. ಅವರ ಮಾರ್ಗದರ್ಶನ ನಮ್ಮಂಥವರಿಗೆ ಅಗತ್ಯ,’ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.