ADVERTISEMENT

ತುಮಕೂರು ಜಿಲ್ಲೆ ನನಗೆ ಹೊಸದಲ್ಲ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 8:37 IST
Last Updated 25 ಮಾರ್ಚ್ 2024, 8:37 IST
ತುಮಕೂರು ತಾಲ್ಲೂಕಿನ ಬಾಣಾವರ ಗೇಟ್‌ ಬಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ, ಶಾಸಕ ಬಿ.ಸುರೇಶ್‌ಗೌಡ ಇತರರು ಉಪಸ್ಥಿತರಿದ್ದರು
ತುಮಕೂರು ತಾಲ್ಲೂಕಿನ ಬಾಣಾವರ ಗೇಟ್‌ ಬಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ, ಶಾಸಕ ಬಿ.ಸುರೇಶ್‌ಗೌಡ ಇತರರು ಉಪಸ್ಥಿತರಿದ್ದರು   

ತುಮಕೂರು: ಜಿಲ್ಲೆ ನನಗೆ ಹೊಸದಲ್ಲ. ಕಳೆದ 40 ವರ್ಷಗಳಿಂದ ಒಡನಾಟ ಇಟ್ಟುಕೊಂಡಿದ್ದೇನೆ. ತುಮಕೂರು ನನ್ನ ತಾಯಿನಾಡಿನಷ್ಟೇ ಪವಿತ್ರವಾದದ್ದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.

ತಾಲ್ಲೂಕಿನ ಬಾಣಾವರ ಗೇಟ್‌ ಬಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಯ ಜತೆಗೆ ಕೈಜೋಡಿಸಿ ಎಲ್ಲ ಕಡೆ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಆಗಬೇಕು. ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆಯಿದೆ. ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಶಾಸಕ ಬಿ.ಸುರೇಶ್‌ಗೌಡ, ‘ಕೇವಲ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲಿಂದ ಹಣ ತರುತ್ತಾರೆ’ ಎಂದು ಪ್ರಶ್ನಿಸಿದರು.

ಜಗತ್ತಿನಲ್ಲಿ ನಮ್ಮ ದೇಶದ ವರ್ಚಸ್ಸು ಮತ್ತಷ್ಟು ಹೆಚ್ಚಾಗಬೇಕು. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರು ಶ್ರಮಿಸಬೇಕು. ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸುವ ಕೆಲಸ ಮಾಡಬೇಕು ಎಂದರು.

ಬಿಜೆಪಿಯ ಮುಖಂಡರಾದ ಶಂಕರ್, ವೈ.ಎಚ್‌.ಹುಚಯ್ಯ, ಶಿವಕುಮಾರ್‌, ಸಿದ್ದೇಗೌಡ, ಪಂಚೆ ರಾಮಚಂದ್ರಪ್ಪ, ನರಸಿಂಹಮೂರ್ತಿ, ಉಮೇಶ್‌ಗೌಡ, ಅಂಜಿನಪ್ಪ, ಸುಮಿತ್ರಾದೇವಿ, ರೇಣುಕಮ್ಮ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.