ADVERTISEMENT

ಗುಬ್ಬಿ | ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 4:10 IST
Last Updated 21 ಜುಲೈ 2024, 4:10 IST
   

ಗುಬ್ಬಿ: ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ಬೆಳಿಗ್ಗೆ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಶಿವಪ್ರಸಾದ್ ಆರಾಧ್ಯ (55) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರೈಲ್ವೆ ಪೊಲೀಸರು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಎಎಸ್‌ಪಿ ಮರಿಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.