ತುಮಕೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ (ಬಿಸಿಎಂ) ವಿದ್ಯಾರ್ಥಿ ನಿಲಯಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪದ ಆರೋಪದ ಮೇಲೆ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ.
2013 ಅಕ್ಟೋಬರ್‌ನಿಂದ 2024 ಮಾರ್ಚ್ ವರೆಗೆ ಹಂಚಿಕೆಯಾಗಿದ್ದ ಅಕ್ಕಿ ಮತ್ತು ಗೋಧಿಯನ್ನು ಎತ್ತುವಳಿ ಮಾಡಿ ಹಾಸ್ಟೆಲ್‌ಗಳಿಗೆ ಸರಬರಾಜು ಮಾಡುವಲ್ಲಿ ಅಧಿಕಾರಿ ಲೋಪವೆಸಗಿದ್ದಾರೆ. ಸಿದ್ಧಗಂಗಾ ಮಠದಿಂದ ನಿಯಮ ಬಾಹಿರವಾಗಿ ಅಕ್ಕಿ ಸಾಲ ತಂದಿರುವುದು ಖಚಿತಪಟ್ಟಿದೆ ಎಂದು ಅಮಾನತು ಆದೇಶದಲ್ಲಿ ಹೇಳಲಾಗಿದೆ. ‘ಅಕ್ಕಿ ಕೊರತೆ, ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ’ ಸುದ್ದಿ ಫೆ. 19ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.