ADVERTISEMENT

ಮಧುಗಿರಿ | ಹೆಚ್ಚುತ್ತಿದೆ ಕಳ್ಳತನ: ಕಡಿವಾಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಮೇ 2024, 13:33 IST
Last Updated 11 ಮೇ 2024, 13:33 IST
ಮಧುಗಿರಿ ಪಟ್ಟಣದ ಪೊಲೀಸ್ ಠಾಣೆಗೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಶನಿವಾರ ಭೇಟಿ ನೀಡಿ ಸಿಪಿಐ ಮತ್ತು ಪಿಎಸ್‌ಐಗಳೊಂದಿಗೆ ಸಮಾಲೋಚನೆ ನಡೆಸಿದರು
ಮಧುಗಿರಿ ಪಟ್ಟಣದ ಪೊಲೀಸ್ ಠಾಣೆಗೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಶನಿವಾರ ಭೇಟಿ ನೀಡಿ ಸಿಪಿಐ ಮತ್ತು ಪಿಎಸ್‌ಐಗಳೊಂದಿಗೆ ಸಮಾಲೋಚನೆ ನಡೆಸಿದರು   

ಮಧುಗಿರಿ: ತಾಲ್ಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಪೊಲೀಸರು ಕಡಿವಾಣ ಹಾಕಬೇಕು. ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರ ಭೇಟಿ ನೀಡಿ ಸಿಪಿಐ ಮತ್ತು ಪಿಎಸ್‌ಐ ಅವರೊಂದಿಗೆ ಸಮಾಲೋಚನೆ ನಡೆಸಿದರು.

ತಾಲ್ಲೂಕಿನಲ್ಲಿ ಇತ್ತೀಚೆಗೆ ಕಳ್ಳತನ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದ್ದರಿಂದ ಪೊಲೀಸ್ ಇಲಾಖೆ ಕಠಿಣ ನಿರ್ಧಾರ ತೆಗೆದುಕೊಂಡು ಸಾರ್ವಜನಿಕರ ಹಿತ ಕಾಪಾಡಬೇಕು. ರಾತ್ರಿ ಪೊಲೀಸ್‌ ಸಿಬ್ಬಂದಿ ಗಸ್ತು ತಿರುಗುವುದನ್ನು ಹೆಚ್ಚಿಸಬೇಕು. ಪಟ್ಟಣದ ಎಲ್ಲ ಮುಖ್ಯ ರಸ್ತೆಗಳಿಗೆ ಈಗಾಗಲೇ ಸಿಸಿ ಟಿವಿ ಕ್ಯಾಮರಾ ಅಳವಡಿಸಿದ್ದು, ಅಗತ್ಯವಿದ್ದಲ್ಲಿ ಮತ್ತಷ್ಟು ಕಡೆ ಕ್ಯಾಮೆರಾ ಅಳವಡಿಸಬೇಕು ಎಂದು ಸೂಚಿಸಿದರು.

ADVERTISEMENT

ಪಟ್ಟಣದಲ್ಲಿ ಕೆಲ ಯುವಕರು ಗಾಂಜಾ ಸೇವನೆ ಚಟಕ್ಕೆ ಒಳಗಾಗಿದ್ದು, ಇದರ ಬಗ್ಗೆ ನಿಗಾ ವಹಿಸಬೇಕು. ಇದು ಯಾವ ಭಾಗದಿಂದ ಸರಬರಾಜಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.

ಸಿಪಿಐ ರವಿ, ಪಿಎಸ್‌ಐ ಮುತ್ತುರಾಜು, ರವಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ, ಸದಸ್ಯರಾದ ಲಾಲಾಪೇಟೆ ಮಂಜುನಾಥ್, ಮಂಜುನಾಥ್ ಆಚಾರ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.