ADVERTISEMENT

ತಿಪಟೂರು: 9ರಂದು ಕಲ್ಪೋತ್ಸವ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 3:04 IST
Last Updated 7 ಡಿಸೆಂಬರ್ 2023, 3:04 IST

ತಿಪಟೂರು: ಕಲ್ಪತರು ನಾಡ ಹಬ್ಬ ಕಲ್ಪೋತ್ಸವವು ಡಿಸೆಂಬರ್‌ 9ರಂದು ನಡೆಯಲಿದೆ. ಈ ಬಾರಿ ಕಲ್ಪತರು ರತ್ನ ಪ್ರಶಸ್ತಿಯನ್ನು ಶೈಕ್ಷಣಿಕ ಕ್ಷೇತ್ರದ ಅವಿರತ ಸಾಧಕ ಎಸ್.ವಿ.ಪಿ ವಿದ್ಯಾಸಂಸ್ಥೆ ಸಂಸ್ಥಾಪಕ ಎಸ್.ಕೆ.ರಾಜಶೇಖರ್‌ಗೆ ನೀಡಲಾಗುತ್ತಿದೆ ಎಂದು ಕಲಾಕೃತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗಣೇಶ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲು ರಂಗಮಂದಿರದಲ್ಲಿ ಶನಿವಾರ ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಂಗಾಪುರದ ಗುರುಪರದೇಶಿಕೇಂದ್ರ ಸ್ವಾಮೀಜಿ, ಗುರುಕುಲಾನಂದಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ತಮ್ಮಡಿಹಳ್ಳಿ ವಿರಕ್ತಮಠದ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ, ಶಾಸಕ ಕೆ.ಷಡಕ್ಷರಿ, ಮಾಜಿ ಸಚಿವ ಬಿ.ಸಿ ನಾಗೇಶ್, ಕಲಾಕೃತಿ ಸಂಸ್ಥೆಯ ಉಪಾಧ್ಯಕ್ಷ ಶಿವಪ್ರಸಾದ್, ಶ್ರೀರಂಗ ಆಸ್ಪತ್ರೆ ವೈದ್ಯ ಡಾ.ವಿವೇಚನ್, ನಗರಸಬಾ ಸದಸ್ಯ ಯೋಗೀಶ್ ಭಾಗವಹಿಸಲಿದ್ದಾರೆ. ಸಂಜೆ ‘ಕಾಮಿಡಿ ಕಿಲಾಡಿಗಳು’, ‘ಗಿಚ್ಚಿ ಗಿಲಿಗಿಲಿ’, ‘ಸರಿಗಮಪ’ ತಂಡದಿಂದ ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ.ಶ್ರೀಧರ್, ಯುವ ಮುಖಂಡ ನಿಖಿಲ್ ರಾಜಣ್ಣ, ತಿಪಟೂರು ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.