ತಿಪಟೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತವಿಲ್ಲದ ಕಾರಣ ಕಳೆದ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆಯಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ, ಜೆಡಿಎಸ್ ಉಪಾಧ್ಯಕ್ಷ ಸ್ಥಾನದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. .
ನಗರಸಭೆಯಲ್ಲಿ ಒಟ್ಟು 31 ಸದಸ್ಯರಿದ್ದಾರೆ. ಬಿಜೆಪಿ– 12, ಕಾಂಗ್ರೆಸ್– 9, ಜೆಡಿಎಸ್– 4 ಹಾಗೂ 6 ಪಕ್ಷೇತರ ಸದಸ್ಯರಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್ ಸಂಖ್ಯೆ 17. ಪಕ್ಷೇತರರಾಗಿ ಗೆದ್ದಿರುವ ಸದಸ್ಯರಲ್ಲಿ ಈಗಾಗಲೇ ಇಬ್ಬರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು, ಒಬ್ಬರು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾರೆ, ಮೂವರು ಸದಸ್ಯರು ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ.
ಲೋಕಸಭಾ ಚುನಾವಣೆಯಲ್ಲಿನ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಇಲ್ಲಿಯೂ ಮುಂದುವರೆದರೆ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.