ADVERTISEMENT

ತುಮಕೂರು: 200ರ ಗಡಿ ದಾಟಿದ ಡೆಂಗಿ

ಐದು ದಿನದಲ್ಲಿ 25 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:21 IST
Last Updated 9 ಜುಲೈ 2024, 15:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಇದುವರೆಗೆ 207 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ಐದು ದಿನಗಳಲ್ಲಿ ಹೊಸದಾಗಿ 25 ಪ್ರಕರಣಗಳು ಖಚಿತಪಟ್ಟಿವೆ. ಒಬ್ಬರಿಗೆ ಚಿಕುನ್‌ ಗುನ್ಯಾ ಇರುವುದು ದೃಢವಾಗಿದೆ.

ಈ ವರ್ಷದ ಜನವರಿಯಿಂದ ಜುಲೈ 5ರ ವರೆಗೆ 182 ಪ್ರಕರಣಗಳು ದಾಖಲಾಗಿದ್ದವು. ಜುಲೈ 9ರ ವರೆಗೆ ಈ ಸಂಖ್ಯೆ 207ಕ್ಕೆ ಏರಿಕೆ ಕಂಡಿದೆ. ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯವಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಬಾಲಕಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಈಚೆಗೆ ಅಧಿಕಾರಿಗಳ ತುರ್ತು ಸಭೆ ಕರೆದು ಡೆಂಗೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ನಗರ ಪ್ರದೇಶದಲ್ಲಿ ವಾರಕ್ಕೆ ಎರಡು ಬಾರಿ ಫಾಗಿಂಗ್‌ ಮಾಡಲಾಗುತ್ತಿದೆ. ಪ್ರತಿ ಶುಕ್ರವಾರ ಮನೆ ಮನೆಗೆ ಭೇಟಿ ನೀಡಿ ಲಾರ್ವಾ ಸರ್ವೆ ನಡೆಸುತ್ತಿದ್ದಾರೆ. ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸುವ ಕಾರ್ಯವು ಮತ್ತಷ್ಟು ವೇಗ ಪಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.