ADVERTISEMENT

ತುಮಕೂರು: ಉರುಳಿದ ಮರ, ವಿದ್ಯುತ್‌ ಕಂಬ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 4:18 IST
Last Updated 21 ಜೂನ್ 2024, 4:18 IST
ತುಮಕೂರು ರೈಲು ನಿಲ್ದಾಣದ ರಸ್ತೆಯಲ್ಲಿ ನೆಲಕ್ಕುರುಳಿದ ಮರ
ತುಮಕೂರು ರೈಲು ನಿಲ್ದಾಣದ ರಸ್ತೆಯಲ್ಲಿ ನೆಲಕ್ಕುರುಳಿದ ಮರ   

ತುಮಕೂರು: ನಗರದಲ್ಲಿ ಗುರುವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಮರ, 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ.

ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಮರವೊಂದು ವಿದ್ಯುತ್‌ ತಂತಿ ಮೇಲೆ ಬಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಯಾವುದೇ ಹಾನಿಯಾಗಿಲ್ಲ. ವಿದ್ಯುತ್‌ ಕಂಬ ನೆಲಕ್ಕೆ ವಾಲಿದ ತಕ್ಷಣ ಫುಟ್‌ಪಾತ್‌ ವ್ಯಾಪಾರಿಗಳು ಅಲ್ಲಿಂದ ಓಡಿ ಹೋಗಿದ್ದಾರೆ. ಇದರಿಂದ ಅಪಾಯ ತಪ್ಪಿದೆ. ಕಂಬ, ಮರ ತೆರವುಗೊಳಿಸುವ ತನಕ ರೈಲು ನಿಲ್ದಾಣದ ರಸ್ತೆ ಬಂದ್‌ ಮಾಡಲಾಗಿತ್ತು.

ಎಲ್‍ಐಸಿ ಕಚೇರಿ ಕಡೆಗೆ ಹೋಗುವ ರಸ್ತೆಯಲ್ಲಿ 2 ಕಂಬ, ಪ್ರವಾಸಿ ಮಂದಿರದ ಪಕ್ಕದಲ್ಲಿದ್ದ 2 ವಿದ್ಯುತ್ ಕಂಬ ಧರೆಗುರುಳಿವೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು, ಬೆಸ್ಕಾಂ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರ, ವಿದ್ಯುತ್‌ ಕಂಬ ತೆರವುಗೊಳಿಸಿದರು.

ADVERTISEMENT
ತುಮಕೂರು ರೈಲು ನಿಲ್ದಾಣದ ಮುಂಭಾಗದಲ್ಲಿ ಗುರುವಾರ ಮಳೆ ಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.