ADVERTISEMENT

ಕ್ಯಾಂಟರ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 17:19 IST
Last Updated 27 ಸೆಪ್ಟೆಂಬರ್ 2024, 17:19 IST

ಕುಣಿಗಲ್: ತಾಲ್ಲೂಕಿನ ಗಿರಿಗೌಡನಪಾಳ್ಯ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿ ಶುಕ್ರವಾರ ರಾತ್ರಿ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ, ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮದ ಯೋಗೇಶ್ (22), ಶ್ರೀನಿವಾಸ (22) ಮೃತರು. ಕಾರ್ಯ ನಿಮಿತ್ತ ಕುಣಿಗಲ್ ಗೆ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT