ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜತೆಗೆ ಹಠದ ಹಸಿವು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಪರಿಕರಗಳ ಕಿಟ್ ವಿತರಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪ್ರಯತ್ನದಿಂದ ಮಾತ್ರ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ವಿಶ್ವದಲ್ಲಿರುವ 900 ಕೋಟಿ ಜನಸಂಖ್ಯೆಯಲ್ಲಿ ಶೇ 15ರಷ್ಟು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಉತ್ತಮ ಕ್ರೀಡಾ ಸಾಧಕರು ಇದ್ದಾರೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್.ರೋಹಿತ್ ಗಂಗಾಧರ್, ‘92 ಕ್ರೀಡಾಪಟುಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಬೇಕು’ ಎಂದು ತಿಳಿಸಿದರು.
ತರಬೇತುದಾರರಾದ ಮೊಹಮದ್ ಇಸ್ಮಾಯಿಲ್, ಶಿವಪ್ರಸಾದ್, ಸುಧೀರ್ ದೇವದಾಸ್, ಜಿಲ್ಲಾ ಕ್ರೀಡಾ ಶಾಲಾ ವಸತಿ ನಿಲಯ ಕ್ಷೇಮ ಪಾಲಕರಾದ ಎಂ.ಶಿಲ್ಪಾ, ಮಂಜುಳಮ್ಮ, ಮಂಜುನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.