ADVERTISEMENT

ತುಮಕೂರು | ಕಾರಾಗೃಹಕ್ಕೆ ಉಪಲೋಕಾಯುಕ್ತರ ದಿಢೀರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 14:17 IST
Last Updated 19 ಅಕ್ಟೋಬರ್ 2024, 14:17 IST
ತುಮಕೂರಿನ ಊರುಕೆರೆ ಬಳಿಯ ಕಾರಾಗೃಹಕ್ಕೆ ಶನಿವಾರ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ ನೀಡಿ ಆಹಾರ ಪರಿಶೀಲಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಇತರರು ಉಪಸ್ಥಿತರಿದ್ದರು
ತುಮಕೂರಿನ ಊರುಕೆರೆ ಬಳಿಯ ಕಾರಾಗೃಹಕ್ಕೆ ಶನಿವಾರ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ ನೀಡಿ ಆಹಾರ ಪರಿಶೀಲಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಇತರರು ಉಪಸ್ಥಿತರಿದ್ದರು   

ತುಮಕೂರು: ನಗರದ ಹೊರವಲಯದ ಊರುಕೆರೆ ಬಳಿಯ ಜಿಲ್ಲಾ ಕಾರಾಗೃಹಕ್ಕೆ ಶನಿವಾರ ಬೆಳಿಗ್ಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೈಲಿನಲ್ಲಿರುವ ಕೈದಿಗಳ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿ ಗುಣಮಟ್ಟ ಪರಿಶೀಲಿಸಿದರು. ಕೈದಿಗಳ ಜತೆ ಚರ್ಚಿಸಿದರು. ಊಟ, ಅಗತ್ಯ ಸೌಲಭ್ಯ ಸೇರಿದಂತೆ ಕಾರಾಗೃಹದ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ‘ಯಾವುದೋ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ತೊಡಗಿಸಿಕೊಂಡು ಶಿಕ್ಷೆಗೆ ಅನುಭವಿಸುವಂತಾಗಿದೆ. ಇನ್ನು ಮುಂದೆ ಮನಃ ಪರಿವರ್ತನೆ ಮಾಡಿಕೊಂಡು ಉತ್ತಮ ಹಾದಿಯಲ್ಲಿ ನಡೆಯಬೇಕು’ ಎಂದು ತಿಳಿಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಎ.ವಿ.ಲಕ್ಷ್ಮಿನಾರಾಯಣ, ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಎಸ್‌.ಮಾಳಿ ಇತರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.