ADVERTISEMENT

ತುಮಕೂರು: ₹ 88 ಕೋಟಿಯಲ್ಲಿ ರೈಲು ನಿಲ್ದಾಣ ಮೇಲ್ದರ್ಜೆಗೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 14:33 IST
Last Updated 5 ಅಕ್ಟೋಬರ್ 2024, 14:33 IST
ವಿ.ಸೋಮಣ್ಣ
ವಿ.ಸೋಮಣ್ಣ   

ತುಮಕೂರು: ನಗರದ ರೈಲು ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ₹88.41 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ, ಆಗಮನ- ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಏರ್- ಕಾನ್‌ಕೋರ್ಸ್, ಲಿಫ್ಟ್, ಎಸ್ಕಲೇಟರ್, ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಂತೆ ತುಮಕೂರು ಕೂಡ ಅತಿವೇಗವಾಗಿ ಬೆಳೆಯುತ್ತಿದ್ದು, ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ವಿಶ್ವ ದರ್ಜೆಯ ಸೌಲಭ್ಯಗಳು ಸಿಗಬೇಕೆಂಬ ಉದ್ದೇಶದಿಂದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ಈಗಾಗಲೇ ನಿಲ್ದಾಣದ ಯೋಜನೆಯ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.