ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಿದ್ದರಾಮಯ್ಯ, ನಾಗೇಂದ್ರ ರಾಜೀನಾಮೆಗೆ ಆಗ್ರಹ

ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2024, 6:14 IST
Last Updated 2 ಜೂನ್ 2024, 6:14 IST
ತುಮಕೂರಿನಲ್ಲಿ ಶನಿವಾರ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್.ರವಿಕುಮಾರ್‌, ಮುಖಂಡರಾದ ಎಸ್.ಶಿವಪ್ರಸಾದ್, ವೈ.ಎಚ್.ಹುಚ್ಚಯ್ಯ, ನವಚೇತನ್, ಟಿ.ಕೆ.ಧನುಷ್, ಸಂದೀಪ್‍ಗೌಡ, ಗಂಗರಾಜು, ಹನುಮಂತರಾಜು ಇತರರು ಪಾಲ್ಗೊಂಡಿದ್ದರು
ತುಮಕೂರಿನಲ್ಲಿ ಶನಿವಾರ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್.ರವಿಕುಮಾರ್‌, ಮುಖಂಡರಾದ ಎಸ್.ಶಿವಪ್ರಸಾದ್, ವೈ.ಎಚ್.ಹುಚ್ಚಯ್ಯ, ನವಚೇತನ್, ಟಿ.ಕೆ.ಧನುಷ್, ಸಂದೀಪ್‍ಗೌಡ, ಗಂಗರಾಜು, ಹನುಮಂತರಾಜು ಇತರರು ಪಾಲ್ಗೊಂಡಿದ್ದರು   

ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರು ಬಿಜಿಎಸ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್.ರವಿಕುಮಾರ್‌, ‘ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ರಾಜ್ಯದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಈ ಅಕ್ರಮಕ್ಕೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆ. ಕೂಡಲೇ ಮುಖ್ಯಮಂತ್ರಿ, ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು’ ಎಂದರು.

ADVERTISEMENT

ಮುಖಂಡ ಎಸ್.ಪಿ.ಚಿದಾನಂದ, ‘ಪರಿಶಿಷ್ಟ ವರ್ಗಗಳಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ. ಈಗ ₹187 ಕೋಟಿ ಅವ್ಯವಹಾರ ನಡೆಸಿದೆ. ಎಲ್ಲ ರೀತಿಯಲ್ಲೂ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ದೂರಿದರು.

ಮುಖಂಡರಾದ ಎಸ್.ಶಿವಪ್ರಸಾದ್, ವೈ.ಎಚ್.ಹುಚ್ಚಯ್ಯ, ನವಚೇತನ್, ಟಿ.ಕೆ.ಧನುಷ್, ಸಂದೀಪ್‍ಗೌಡ, ಗಂಗರಾಜು, ಹನುಮಂತರಾಜು, ಕೆ.ವೇದಮೂರ್ತಿ, ವಿಷ್ಣುವರ್ಧನ್, ಹನುಮಂತರಾಯಪ್ಪ, ಅಂಜನ್‍ಮೂರ್ತಿ, ಮನೋಹರಗೌಡ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ವೆಂಕಟೇಶಾಚಾರ್, ನಿಟ್ಟೂರು ಪ್ರಕಾಶ್, ವಿಜಯಕುಮಾರ್‌ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.