ADVERTISEMENT

ತುಮಕೂರು | ಗ್ರಾಮ ಆಡಳಿತಾಧಿಕಾರಿ ನೇಮಕಾತಿ: 25 ಸಾವಿರ ಅರ್ಜಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 3:06 IST
Last Updated 25 ಅಕ್ಟೋಬರ್ 2024, 3:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಜಿಲ್ಲೆಯಿಂದ 25,216 ಮಂದಿ ಪರೀಕ್ಷೆ ಎದುರಿಸಲಿದ್ದಾರೆ.

ಜಿಲ್ಲೆಯಲ್ಲಿ 73 ಹಾಗೂ ರಾಜ್ಯದಲ್ಲಿ ಒಂದು ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಿದವರಿಗೆ ಆಯಾ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಿಂದಲೇ 25,216 ಮಂದಿ ಅರ್ಜಿ ಸಲ್ಲಿಸಿರುವುದು ವಿಶೇಷ.

ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಅ. 26ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2,672 ಹಾಗೂ ಅ. 27ರಂದು ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ADVERTISEMENT

ವಸ್ತ್ರ ಸಂಹಿತೆ: ಪರೀಕ್ಷಾರ್ಥಿಗಳು ಅರ್ಧ ತೋಳಿನ, ಸಾಧ್ಯವಾದಷ್ಟು ಕಾಲರ್ ರಹಿತ ಅಂಗಿ, ಕಡಿಮೆ ಸಂಖ್ಯೆಯ ಜೇಬುಗಳಿರುವ ಪ್ಯಾಂಟ್ ಧರಿಸಬೇಕು. ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಯೊಳಗೆ ಶೂ, ಕಿವಿಯೋಲೆ, ಉಂಗುರ, ಕಡಗ ಸೇರಿದಂತೆ ಯಾವುದೇ ರೀತಿಯ ಲೋಹದ ಆಭರಣಗಳನ್ನು ತರುವಂತಿಲ್ಲ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಅಥವಾ ಬಟನ್‍ ಹೊಂದಿರುವ ಬಟ್ಟೆ ಧರಿಸುವಂತಿಲ್ಲ. ಮಂಗಳಸೂತ್ರ, ಕಾಲುಂಗುರ ಹೊರತುಪಡಿಸಿ ಇತರೆ ಲೋಹದ ಆಭರಣಗಳನ್ನೂ ಧರಿಸುವಂತಿಲ್ಲ.

ಎಲೆಕ್ಟ್ರಾನಿಕ್ ವಸ್ತು, ಮೊಬೈಲ್ ಫೋನ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂ ಟೂತ್ ಸಾಧನಗಳು, ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.