ADVERTISEMENT

ಗುಬ್ಬಿ: ಅದ್ದೂರಿ ವಿಶ್ವಕರ್ಮ ಜಯಂತಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 14:19 IST
Last Updated 22 ಸೆಪ್ಟೆಂಬರ್ 2024, 14:19 IST
ಗುಬ್ಬಿಯಲ್ಲಿ ವಿಶ್ವಕರ್ಮ ಸಮುದಾಯದಿಂದ ಕಾಳಿಕಾಂಬ ದೇವಿ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು
ಗುಬ್ಬಿಯಲ್ಲಿ ವಿಶ್ವಕರ್ಮ ಸಮುದಾಯದಿಂದ ಕಾಳಿಕಾಂಬ ದೇವಿ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು   

ಗುಬ್ಬಿ: ವಿಶ್ವಕರ್ಮ ಸಮುದಾಯದಿಂದ ಭಾನುವಾರ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಪಟ್ಟಣದ ಚನ್ನಬಸವೇಶ್ವರ ದೇವಾಲಯದ ಆವರಣದಿಂದ ಕುಲದೇವತೆ ಕಾಳಿಕಾಂಬ ದೇವಿ ಮೂರ್ತಿಯನ್ನು ಬೆಳ್ಳಿರಥದಲ್ಲಿ ಕೂರಿಸಿ, ಲಿಂಗದ ವೀರರ ಕುಣಿತ ಹಾಗೂ ವಿವಿಧ ಜನಪದ ಕಲಾ ತಂಡಗಳೊಂದಿಗೆ ಪಟ್ಟಣದ ಹೆದ್ದಾರಿಯಲ್ಲಿ ಮೆರವಣಿಗೆ ಮಾಡಲಾಯಿತು.

ಬಿಸಿಲನ್ನು ಲೆಕ್ಕಿಸದೆ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು.

ADVERTISEMENT

ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನ ಎಲ್ಲ ತಳ ಸಮುದಾಯಗಳ ಅಭಿವೃದ್ಧಿಗೆ ಬದ್ಧ. ಪಟ್ಟಣ ಪಂಚಾಯಿತಿಯಿಂದ ವಿಶ್ವಕರ್ಮ ಸಮುದಾಯಕ್ಕೆ ₹10 ಲಕ್ಷ ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮುದಾಯದ ಜನರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.