ADVERTISEMENT

ಕುಣಿಗಲ್‌: ಡಿ.12ರಂದು ಎಡೆಯೂರು ಲಕ್ಷದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 14:39 IST
Last Updated 5 ಡಿಸೆಂಬರ್ 2023, 14:39 IST

ಕುಣಿಗಲ್‌: ತಾಲ್ಲೂಕಿನ ಎಡೆಯೂರು ಸಿದ್ದಲಿಂಗೇಶ್ವರ ಕ್ಷೇತ್ರದಲ್ಲಿ ಡಿಸೆಂಬರ್ 12ರಂದು ಸಂಜೆ 6 ಗಂಟೆಗೆ ಸಿದ್ದಲಿಂಗೇಶ್ವರ ಸ್ವಾಮಿ ಲಕ್ಷದೀಪೋತ್ಸವ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಲಕ್ಷದೀಪೋತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾತ್ರಿ 10ಕ್ಕೆ ಬೆಳ್ಳಿಪಲ್ಲಕ್ಕಿ ಉತ್ಸವ ರಾತ್ರಿಯಿಡಿ ಜರುಗಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದೇವಾಲಯದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.