ADVERTISEMENT

ತುಮಕೂರು | ಎರಡು ಬೈಕ್‌ಗಳ ಮಧ್ಯೆ ಅಪಘಾತ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 14:23 IST
Last Updated 28 ಜುಲೈ 2024, 14:23 IST
<div class="paragraphs"><p>ಅಪಘಾತ –ಪ್ರಾತಿನಿಧಿಕ ಚಿತ್ರ</p></div>

ಅಪಘಾತ –ಪ್ರಾತಿನಿಧಿಕ ಚಿತ್ರ

   

ತುಮಕೂರು: ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ದೊಡ್ಡೇರಿ ಬಳಿ ಭಾನುವಾರ ಎರಡು ಬೈಕ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಗಿರೀಶ್‌ (25) ಎಂಬುವರು ಮೃತಪಟ್ಟಿದ್ದಾರೆ.

ಗಿರೀಶ್‌ ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ಜಾಲಗುಣಿ ಗ್ರಾಮದ ನಿವಾಸಿ. ಚೇಳೂರಿನಿಂದ ಮಲ್ಲಸಂದ್ರಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ತುಮಕೂರಿನಿಂದ ಚೇಳೂರಿನತ್ತ ತೆರಳುತ್ತಿದ್ದ ಮತ್ತೊಂದು ಬೈಕ್‌ ಮುಖಾಮುಖಿಯಾಗಿ, ಗಿರೀಶ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.