ತುಮಕೂರು: ನಗರದ ಮರಳೂರು ದಿಣ್ಣೆಯಲ್ಲಿ ತಡರಾತ್ರಿ ಚಾಕುವಿನಿಂದ ಚುಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ರಿಹಾನ್ ಪಾಷ (18) ಕೊಲೆಯಾದ ಯುವಕ. ಯುವತಿ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮರಳೂರು ದಿಣ್ಣೆಯ ಸಾದಿಕ್ ಮತ್ತು ಇತರರು ಮನೆಯಲ್ಲಿದ್ದ ರಿಹಾನ್ ರನ್ನು ಮಾತನಾಡಬೇಕು ಎಂದು ಹೊರಗಡೆ ಕರೆದುಕೊಂಡು ಬಂದಿದ್ದರು.
ಈ ವೇಳೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ಚುಚ್ಚಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರಿಹಾನ್ ಪಾಷ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.