ಉಡುಪಿ: ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಅಪರಿಚಿತರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿಯ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಿವಾಸ ಪೂಜಾರಿ ಎಂಬ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಅದರ ಫ್ರೊಫೈಲ್ ಚಿತ್ರವಾಗಿ ಸಂಸದರ ಚಿತ್ರವನ್ನು ಬಳಸಿ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡಲಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರ ವಕೀಲ ಶ್ಯಾಮಸುಂದರ ನಾಯರಿ ಎಂಬುವವರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.