ಕಾಪು (ಪಡುಬಿದ್ರಿ): ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ, ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ ಶೆಟ್ಟಿ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ನಟ ರಕ್ಷಿತ್ ಶೆಟ್ಟಿ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು.
ಕಾಪುವಿನ ಅಮ್ಮನ ಸ್ವರ್ಣ ಗದ್ದುಗೆಗೆ ರಶ್ಮಿತ್ ನಿಖಿಲ್ ಶೆಟ್ಟಿ 9 ಗ್ರಾಂ ಸ್ವರ್ಣ ಸಮರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ತಾಯಿ ರಂಜನಾ ಶ್ರೀಧರ್ ಶೆಟ್ಟಿ, ಸಹೋದರ ರಂಜಿತ್ ಶೆಟ್ಟಿ ಇದ್ದರು.
ಲೋಕಾಯುಕ್ತ ಎಸ್‌ಪಿ ಭೇಟಿ: ಉಡುಪಿ-ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿ, ಮಾರಿಯಮ್ಮನ ದರ್ಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ಮಾತನಾಡಿದ ಅವರು, ಇಳಕಲ್ ಕಲ್ಲಿನಿಂದ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಮೊಟ್ಟಮೊದಲ ದೇಗುಲ ಇದಾಗಿದೆ. ಅನೇಕ ಯೋಜನೆ ಹಮ್ಮಿಕೊಂಡಿರುವ ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರಿ, ಕಾತ್ಯಾಯಿನಿ ತಂಡದ ಸಂಚಾಲಕಿ ವನಿತಾ ಶೆಟ್ಟಿ, ಕಾಪು ಪೊಲೀಸ್ ಉಪನಿರೀಕ್ಷಕ ಪುರುಷೋತ್ತಮ್, ಕಾಪು ಪೊಲೀಸ್ ವೃತ್ತ ಕಚೇರಿ ಹೆಡ್‌ಕಾನ್‌ಸ್ಟೇಬಲ್ ಪ್ರವೀಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.