ಉಡುಪಿ: ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಆಸೋಸಿಯೇಶನ್‌ನಿಂದ ಮೇ 8 ಹಾಗೂ 9 ರಂದು ರಾಜ್ಯ ಹಿರಿಯರ ಹಾಗೂ 20 ವಯೋಮಿತಿಯ ಪುರುಷ ಹಾಗೂ ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಹಾಗೂ ಶಾಸಕರೂ ಆದ ರಘುಪತಿ ಭಟ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ಕೂಟ ನಡೆಯಲಿದ್ದು, 750 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಎರಡು ದಿನದ ಕ್ರೀಡಾಕೂಟದಲ್ಲಿ 80 ಸ್ಪರ್ಧೆಗಳು ನಡೆಯಲಿವೆ ಎಂದರು.
ಜೂನ್ 2 ರಿಂದ 4 ರವರೆಗೆ ಗುಜರಾತ್‌ನಲ್ಲಿ ನಡೆಯುವ 20 ವಯೋಮಿತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕರ್ನಾಟಕ ತಂಡ ಹಾಗೂ ಜೂನ್ 10 ರಿಂದ 14 ರವರೆಗೆ ತಮಿಳುನಾಡಿನಲ್ಲಿ ನಡೆಯುವ 60ನೇ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ರಾಜ್ಯ ತಂಡವನ್ನು ಆಯ್ಕೆ ಮಾಡಲಾಗುವುದು. ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನಿಯಮಾನುಸಾರ ಆಯ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಅಥ್ಲೆಟಿಕ್ ಕೂಟದಲ್ಲಿ ಭಾಗವಹಿಸುವವರಿಗೆ ಎಎಫ್‌ಐ, ಯುಐಡಿ ಕಡ್ಡಾಯ. 20ರ ವಯೋಮಿತಿಯ ಕ್ರೀಡಾಪಟುಗಳು ಜನನ ಪ್ರಮಾಣಪತ್ರ ನೀಡಬೇಕು ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಹಿರಿಯರ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಕುಮಾರ್, ಸದಸ್ಯ ಲಚ್ಚೇಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.